ಅತ್ಯಾಚಾರ ಅಪರಾಧಿಗೆ ಸಜೆ
ಚಿಕ್ಕಮಗಳೂರು: ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಅಪರಾಧಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 3 ವರ್ಷ ಕಠಿಣ ಶಿಕ್ಷೆ ಹಾಗೂ ರು. 2 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಕಳೆದ ವರ್ಷ ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದಲ್ಲಿ ಚಿತ್ರ ಬಿಡಿಸಿಕೊಡುವುದಾಗಿ ಹೇಳಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ಚೆಲುವರಾಜ ಎಂಬುವವರ ಮೇಲೆ ಶೃಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಹೆಚ್.ಎಸ್. ಕಮಲಾ ಅವರು ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಚೆಲುವರಾಜ ಯಾನೆ ಸೆಲ್ವರಾಜ್ಗೆ 3 ವರ್ಷಕಠಿಣ ಶಿಕ್ಷೆ ಹಾಗೂ 2 ಸಾವಿರ ರು. ದಂಡ ವಿಧಿಸಿದ್ದಾರೆ.
ಸರ್ಕಾರದ ಪರವಾಗಿ ಅಭಿಯೋಜಕ ಕೆ.ಕೆ. ಕುಲಕರ್ಣಿ ವಾದ ಮಾಡಿದ್ದರು.