ಎಬಿವಿಪಿ ಪ್ರತಿಭಟನೆ
ಶೃಂಗೇರಿ: ಬೆಂಗಳೂರಿನಲ್ಲಿ ಇತ್ತೀಚೆಗೆ ಯುವತಿಯ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಕಟ್ಟೆಬಾಗಿಲು ವೃತ್ತದಲ್ಲಿ ಮಾನವ ಸರಪಳಿ ನಡೆಸಿದರು. ಮಹಿಳೆಯರ ಮೇಲೆ ದೌರ್ಜನ್ಯ, ಸರಣಿ ಅತ್ಯಾಚಾರ ಘಟನೆಗಳು ನಡೆಯುತ್ತಿದ್ದರೂ ಸರ್ಕಾರ ಗಮನಿಸುತ್ತಿಲ್ಲ ಎದರು. ಪಾಲಚಂದ್ರ, ನಂದೀಶ್ ಮತ್ತಿತರರು ಉಪಸ್ಥಿತರಿದ್ದರು.