ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಜಯರಾಮ್ ಆಯ್ಕೆ
ಚಿಕ್ಕಮಗಳೂರು: ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಎನ್.ಜೆ. ಜಯರಾಮ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆರ್. ರಾಜಶೇಖರ್ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಜಯರಾಮ್ ಅವರನ್ನು ಆಯ್ಕೆ ಮಾಡಲಾಯಿತು.
ನಂತರ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಅಧ್ಯಕ್ಷರಿಗೆ ಅಭಿನಂದನೆ ಶಾಸಕ ಬಿ.ಬಿ. ನಿಂಗಯ್ಯ ಅಭಿನಂದಿಸಿದರು. ವಕೀಲರ ಪರಿಷತ್ ಉಪಾಧ್ಯಕ್ಷ ಎಸ್.ಎಲ್. ಭೋಜೇಗೌಡಬ್ಯಾಂಕಿನ ಉಪಾಧ್ಯಕ್ಷ ರಮೇಶ್, ಮಾಜಿ ಅಧ್ಯಕ್ಷ ಎಸ್.ಎಲ್. ಧರ್ಮೇಗೌಡ, ಟಿ.ಡಿ. ಸತ್ಯನ್, ರಾಮಸ್ವಾಮಿ, ರವಿ, ಎಚ್.ಬಿ. ಶಿವಣ್ಣ, ವ್ಯವಸ್ಥಾಪಕ ನಾಗಶಯನ, ಉಪ ನಿಬಂಧಕ ಕಾಂತರಾಜು, ಲೋಕೇಗೌಡ, ರಂಗಪ್ಪ, ಯೋಗೀಶ್, ಕಾಟೇಗೌಡ, ಬಿ.ನೀ. ವಿಶ್ವನಾಥ್, ಜೆಡಿಎಸ್ ಮುಖಂಡ ಕೆ. ಭರತ್ ಹಾಜರಿದ್ದರು.