ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿಧಾನಸೌಧ ಚಲೋ ನಾಳೆ

Rashmi Kasaragodu
Updated On : 22 Jul 2014, 11:11 am

ಚಿಕ್ಕಮಗಳೂರು: ಕಂದಾಯ ಇಲಾಖೆ ಗ್ರಾಮ ಸಹಾಯಕರ ಹುದ್ದೆಯನ್ನು ಡಿ ದರ್ಜೆಗೇರಿಸಿ ಸೇವಾ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಜು. 23 ರಂದು ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದಿಂದ ವಿಧಾನಸೌಧ ಚಲೋ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಯು.ಪಿ. ಜಗದೀಶ್ ತಿಳಿಸಿದ್ದಾರೆ.
ಕಂದಾಯ ಇಲಾಖೆಯಲ್ಲಿ 34 ವರ್ಷಗಳಿಂದ ಗ್ರಾಮ ಸಹಾಯಕರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದರೂ ಸರ್ಕಾರಗಳು ಸೇವಾ ಭದ್ರತೆ ನೀಡುವಲ್ಲಿ ವಿಫಲವಾಗಿವೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ತಮ್ಮ ಅಳಲನ್ನು ಪರಿಗಣಿಸಿ ಗ್ರಾಮ ಸಹಾಯಕರ ಹುದ್ದೆಯನ್ನು ಡಿ ದರ್ಜೆ ಎಂದು ಪರಿಗಣಿಸಬೇಕು ಮತ್ತು ಸೇವಾ ಭದ್ರತೆ ನೀಡುವ ಮೂಲಕ ನಮ್ಮ ಹಕ್ಕನ್ನು ನೀಡಬೇಕೆಂದು ಒತ್ತಡ ಹೇರುವ ಸಲುವಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಹಸ್ರಾರು ನೌಕರರು ಆಗಮಿಸಿ ವಿಧಾನಸೌಧಕ್ಕೆ ತೆರಳಲಿದ್ದು, ಜಿಲ್ಲೆಯಲ್ಲಿರುವ ಗ್ರಾಮ ಸಹಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement