ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅತ್ಯಾಚಾರಿಗಳಿಗೆ ಶಿಕ್ಷೆಯಾಗಲಿ

Rashmi Kasaragodu
Updated On : 23 Jul 2014, 11:45 am

ಚಿಕ್ಕಮಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಚಿಕ್ಕಮಗಳೂರು ನಗರ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ನಗರದ ಹನುಮಂತಪ್ಪ ವೃತ್ತದಿಂದ ಮೆರವಣಿಗೆಯಲ್ಲಿ ಹೊರಟ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಆಗಾಗ ನಡೆಯುತ್ತಿದ್ದು, ತನಿಖೆಯ ವಿಳಂಬ ಧೋರಣೆಯಿಂದಾಗಿ ಈ ರೀತಿಯ ಪ್ರಕರಣಗಳು ಮರುಕಳಿಸುತ್ತಿವೆ. ರಾಜ್ಯ ಸರ್ಕಾರ ತನಿಖೆ  ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಚಿಕ್ಕಮಗಳೂರು ನಗರ ಟ್ಯಾಕ್ಸಿ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಪಿ. ಶಾಂತಮೂರ್ತಿ, ಕಾರ್ಯದರ್ಶಿ ಅನಿಲ್ ಬ್ಯಾಪಿಸ್ಟ್ ಹಾಗೂ ಚಾಲಕರು ಮತ್ತು ಮಾಲಕರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement