ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅತ್ಯಾಚಾರ ಘಟನೆ ಖಂಡಿಸಿ ಸಂಘಟನೆಗಳ ಪ್ರತಿಭಟನೆ

Rashmi Kasaragodu
Updated On : 26 Jul 2014, 11:11 am

ಮೂಡಿಗೆರೆ: ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಘಟನೆ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಡಾ. ರಾಜ್ ಕನ್ನಡ ಸಂಘ ಕಳಸ ಮತ್ತು ಕರವೇ ಕಳಸ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ಮಹಿಳಾ ದೌರ್ಜನ್ಯ ಪ್ರಕರಣ, ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣ  ಹೆಚ್ಚಳವಾಗುತ್ತಿದೆ. ನಿರಂತರವಾಗಿ ನಡೆಯುತ್ತಿರುವ ಇಂತಹ ಪ್ರಕರಣಗಳಿಂದ ಹಗಲಿನಲ್ಲಿಯೂ ಮಹಿಳೆಯರು ಒಬ್ಬಂಟಿಯಾಗಿ ತಿರುಗಾಡಲಾಗದ ಪರಿಸ್ಥಿತಿ ಎದುರಾಗಿದೆ.
ಮಹಿಳೆಯರ ಮೇಲಿನ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಕಾನೂನು ಇನ್ನಷ್ಟು ಬಿಗಿಯಾಗಬೇಕಾಗಿದ್ದು, ಅತ್ಯಚಾರಿಗಳಿಗೆ ತಕ್ಷಣ ಶಿಕ್ಷೆಯಾಗುವಂತೆ ಕಾನೂನು ಅವಶ್ಯಕವಾಗಿದೆ ಎಂದರು.
ಶಾಲಾಕಾಲೇಜುಗಳಲ್ಲಿ ಮಹಿಳೆಯರು ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಸೂಕ್ತ ರಕ್ಷಣೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಕಳಸ ನಾಡ ಕಚೇರಿ ಉಪತಹಸೀಲ್ದಾರರರ ಮುಖಾಂತರ ತಹಸೀಲ್ದಾರರಿಗೆ ಕೊಟ್ಟ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ರಾಘವೇಂದ್ರ, ಕನ್ನಡ ಸಂಘದ ಅಧ್ಯಕ್ಷ ರಾಜು, ದಿನೇಶ, ನಾರಾಯಣ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement