ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸ್ವಾತಂತ್ರ್ಯೋತ್ಸವಸಿದ್ಧತೆ ಸಭೆ

Rashmi Kasaragodu
Updated On : 26 Jul 2014, 11:11 am

ನರಸಿಂಹರಾಜಪುರ:  ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿ ಶುಕ್ರವಾರ ಆ.15ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.
ಧಾರಾಕಾರ ಮಳೆ ಮುನ್ಸೂಚನೆ ಹಿನ್ನೆಲೆ ಮೆರವಣಿಗೆ ನಡೆಸದಿರಲು, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಆ.15ರಂದು ಬೆಳಗ್ಗೆ 7.30 ಗಂಟೆಗೆ ಧ್ವಜಾರೋಹಣ, 9 ಗಂಟೆಗೆ ಕುವೆಂಪು ಕ್ರೀಡಾಂಗಣದಲ್ಲಿ ತಹಸೀಲ್ದಾರ್ ಅವರಿಂದ ಧ್ವಜಾರೋಹಣ ನೆರವೇರಿಸಲು, ಅಧ್ಯಕ್ಷತೆ ವಹಿಸಲು ಶಾಸಕ ಡಿ.ಎನ್.ಜೀವರಾಜ್ ಅವರನ್ನು ಆಹ್ವಾನಿಸುವುದು, ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಸಲು ಸಭೆ ತೀರ್ಮಾನಿಸಿತು.
ಪೂರ್ವಭಾವಿ ಸಭೆ ಅಧ್ಯಕ್ಷತೆಯನ್ನು ತಹಸೀಲ್ದಾರ್ ಕೃಷ್ಣಮೂರ್ತಿ ವಹಿಸಿದ್ದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಜಗದೀಶ್, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಲೇಖಾ ವಸಂತ್, ತಾಲೂಕು ದೈಹಿಕ ಪರಿವೀಕ್ಷಿಕ ಕೆ.ಮೌನೇಶ್ವರಾಚಾರ್, ಅಕ್ಷರ ದಾಸೋಹ ಯೋಜನೆಯ ಮಾಳಮ್ಮನವರ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ರುದ್ರಪ್ಪ, ಜೂನಿಯರ್ ಕಾಲೇಜಿನ ಉಪಪ್ರಾಂಶುಪಾಲ ಬಿ.ಸಿ. ವೆಂಕಟೇಶ್, ದೈಹಿಕ ಶಿಕ್ಷಕ ಕೃಷ್ಣಮೂರ್ತಿ, ಸುರೇಶ್, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಡಾ. ಬಾಲಕೃಷ್ಣ ವಿರುದ್ಧ ಅಪಪ್ರಚಾರ ಸಲ್ಲ: ಗೌಸ್
ನರಸಿಂಹರಾಜಪುರ:  ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞ ವೈದ್ಯರಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಡಾ.ಬಾಲಕೃಷ್ಣ ಅವರ ಮೇಲೆ ಕೆಲವರು ವೈಯಕ್ತಿಕ ಕಾರಣಗಳಿಂದ ನಿರಂತರವಾಗಿ ಅಪಪ್ರಚಾರ ಮಾಡುತ್ತಿರುವುದು ಖಂಡನಾರ್ಹ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೌಸ್ ಮೊಹಿದ್ದೀನ್ ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ 5 ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವೆ ಪಡೆಯಲು ಕೊಪ್ಪ, ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರು, ತೀರ್ಥಹಳ್ಳಿ, ಶಿವಮೊಗ್ಗದ ಕಡೆಯಿಂದ ಗರ್ಭಿಣಿಯರು ಹೆರಿಗೆಗೆ ಇದೇ ಆಸ್ಪತ್ರೆಗೆ ಬರುತ್ತಿದ್ದಾರೆ. ಇವರ ಜನಪ್ರಿಯತೆ ಸಹಿಸಲಾಗದೆ ಕೆಲವು ಹಿತಾಸಕ್ತಿಗಳು ಡಾ.ಬಾಲಕೃಷ್ಣ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದಿದ್ದಾರೆ.
ಅರಣ್ಯ ಹಕ್ಕು ಮಾನ್ಯತಾ ಕಾಯ್ದೆ ತಿದ್ದುಪಡಿಗೆ ಆಗ್ರಹ
ಮೂಡಿಗೆರೆ:  ಇತರೆ ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಕ್ಕು ಮಾನ್ಯತಾ ಕಾಯ್ದೆ 2006ರಂತೆ ಇತರೆ ಪಾರಂಪರಿಕ ಅರಣ್ಯ ವಾಸಿಗಳು 2005 ಡಿ.13 ಕ್ಕಿಂತ ಹಿಂದೆ 25 ವರ್ಷಗಳ ನಂತರ ಅಂದರೆ 1930 ಕ್ಕಿಂತ ಮೊದಲಿನಿಂದಲೂ ಅರಣ್ಯದಲ್ಲಿ ವಾಸಿಸುತ್ತ ಬಂದಿರುವುದು ನ್ಯಾಯಸಮ್ಮತವಲ್ಲ.
ಆದ್ದರಿಂದ 1930 ಮೊದಲು ಎನ್ನುವ ಬದಲು 24-10-1980 ಕ್ಕಿಂತ ಮೊದಲು ಎಂದು ತಿದ್ದುಪಡಿ ಮಾಡಲಿ ಎಂದು ಸಂಸೆ ಗ್ರಾಮ ಅರಣ್ಯ ಹಕ್ಕು ಸಮಿತಿ ಸರ್ಕಾರವನ್ನು ಒತ್ತಾಯಿಸಿದೆ ಎಂದು ಅರಣ್ಯ ಸಮಿತಿಯ ಅಧ್ಯಕ್ಷ ಕೃಷ್ಣ ತಿಳಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಉಪವಿಭಾಗೀಯ ಮಟ್ಟದ ಅರಣ್ಯ ಹಕ್ಕು ಸಮಿತಿ ಅಧ್ಯಕ್ಷರಾದ ಉಪವಿಭಾಗಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದ ಸಮಿತಿಯು 1930ರಲ್ಲಿ ನಮ್ಮ ದೇಶಕ್ಕೆ ಸ್ವಾತಂತ್ರ್ಯವೇ ಬಂದಿರಲಿಲ್ಲ. ಆ ಸಂದರ್ಭ ಜಮೀನ್ದಾರಿಕೆ ಪದ್ಧತಿ ಬಲವಾಗಿ ಬೇರೂರಿತ್ತು. ಅವರ ಕೈ ಕೆಳಗೆ ಗೇಣಿ ಒಕ್ಕಲುಗಳು ಮತ್ತು ಕೃಷಿ ಕಾರ್ಮಿಕ ಕುಟುಂಬಗಳು ಇದ್ದವು. 1975ರ ಹೊತ್ತಿಗೆ ಭೂ ಸುಧಾರಣಾ ಕಾಯ್ದೆ ಜಾರಿಯಾದಾಗ ಗೇಣಿ ಕುಟುಂಬಗಳು ಸ್ವಂತ ಜಮೀನು ಹೊಂದಿದ ಖಾತೆದಾರರ ಕುಟುಂಬಗಳಾದವು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement