ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ತಾಲೂಕು ಕಚೇರಿ ಎದುರು ಕರವೇ ಪ್ರತಿಭಟನೆ

Rashmi Kasaragodu
Updated On : 27 Jul 2014, 11:16 am

ನರಸಿಂಹರಾಜಪುರ: ಮುಗ್ಧ ಹೆಣ್ಣು ಮಕ್ಕಳ, ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಕ್ರೂರಿಗಳಿಗೆ ಗಲ್ಲು  ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಕಾರ್ಯಕರ್ತರು ಶನಿವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ನಂತರ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ತಾಲೂಕು ರಕ್ಷಣಾ ವೇದಿಕೆ ಮುಖಂಡ ಪಿ.ಕೆ.ಬಸವರಾಜ್ ಮಾತನಾಡಿ, ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ  ರಕ್ಷಣಾ ವೇದಿಕೆ ತಾಲೂಕು ಘಟಕ ಅಧ್ಯಕ್ಷ ಎನ್.ಕೆ.ಶ್ರೀಧರ್, ಮಹಿಳಾ ಘಟಕ ಅಧ್ಯಕ್ಷೆ ಪ್ರೇಮ ಶ್ರೀನಿವಾಸ್, ತಾಲೂಕು ಘಟಕ ಗೌರವಾಧ್ಯಕ್ಷ ಪ್ರಶಾತ ಶೆಟ್ಟಿ, ಹಿರಿಯ ಸಲಹೆಗಾರ ಸುನಿಲ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಹರೀಶ್, ಪಿ.ಪಿ.ಸಾಜು, ಶಿಜು, ಆರ್. ಶ್ರೀಕಾಂತ್, ಮಹಿಳಾ ಘಟಕದ ಪದಾಧಿಕಾರಿಗಳಾದ ಸುನೀತ, ಮಾಲತಿ, ಸ್ವಪ್ನ  ಮುಂತಾದವರಿದ್ದರು. ತಹಸೀಲ್ದಾರ್ ಪರವಾಗಿ ಕಂದಾಯ ಇಲಾಖೆ ಅಧಿಕಾರಿ ಶ್ಯಾಮನಾಯಕ್ ಮನವಿ ಸ್ವೀಕರಿಸಿದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement