ಚಿಕ್ಕಮಗಳೂರು

ಎಲ್ಲೆಂದರಲ್ಲಿ ಕಸ, ಶೌಚಾಲಯವಿಲ್ಲದ ಶಾಲೆ

ಶಿರಾಳಕೊಪ್ಪ:  ಸರ್ಕಾರಿ ಹೆಣ್ಣು ಮಕ್ಕಳ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ಶಾಲೆ ಒಳಗಡೆ ಎಲ್ಲೆಂದರಲ್ಲಿ ನೀರು ನಿಲ್ಲುತ್ತದೆ, ಕಸದ ಗುಡ್ಡೆ ಸೃಷ್ಟಿಸಲಾಗಿದೆ. ಅಷ್ಟೇ ಅಲ್ಲ, ವಿದ್ಯಾರ್ಥಿನಿಯರಿಗೆ ಅಗತ್ಯವಾದ ಪ್ರತ್ಯೇಕ ಶೌಚಾಲಯ ಸೌಲಭ್ಯವಿಲ್ಲದೇ ಶಿಕ್ಷಣ ಇಲಾಖೆ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ.
ಈ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿವರೆಗೆ ವಿದ್ಯಾಭ್ಯಾಸ ಮಾಡುವ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆ ಎನು ಎಂದು ಕೇಳುವವರಿಲ್ಲದಂತಾಗಿದೆ. ಈ ಶಾಲೆ ಹೆಣ್ಣು ಮಕ್ಕಳಿಗಾಗಿ ಮೀಸಲಿರುವ ಶಾಲೆ ಆಗಿರುವುದರಿಂದ ಸುತ್ತಮುತ್ತಲ ಹಲವಾರು ಗ್ರಾಮಗಳಿಂದ ಅಕ್ಕಪಕ್ಕದ ತಾಲೂಕುಗಳಿಂದಲೂ ವಿದ್ಯಾರ್ಥಿನಿಯರು ಆಗಮಿಸುತ್ತಾರೆ.
ಬೆಳಗ್ಗೆ ಬಂದರೆ ಸಂಜೆವರೆಗೂ ಶಾಲೆಯಲ್ಲಿ ಇರುವ ವಿದ್ಯಾರ್ಥಿನಿಯರಿಗೆ ದೇಹಬಾಧೆ ನಿವಾರಿಸಿಕೊಳ್ಳಲು ಸೂಕ್ತ ಪ್ರತ್ಯೇಕ ಶೌಚಾಲಯ ಸೌಲಭ್ಯವಿಲ್ಲ. ಸದ್ಯಕ್ಕೆ ಇರುವ ಶೌಚಾಲಯಕ್ಕೆ ಮೇಲೆ ಮುಚ್ಚಿಗೆ ಇಲ್ಲ. ಬಾಗಿಲೂ ಇಲ್ಲ. ವಿದ್ಯಾರ್ಥಿನಿಯರ ಗೋಳು ಮಾತ್ರ ಯಾರೂ ಕೇಳುತ್ತಿಲ್ಲ. ಶಾಲೆಯ ಕೊಠಡಿಯ ಎದುರು ಸಾಕಷ್ಟು ನೀರು ನಿಲ್ಲುತ್ತಿದೆ. ನೀರು ಹೋಗಲು ಯಾವುದೇ ವ್ಯವಸ್ಥೆ ಮಾಡಿಲ್ಲ. ಹಂದಿ-ನಾಯಿಗಳು ಓಡಾಡುತ್ತಾ ಗಲೀಜು ಮಾಡುತ್ತಿವೆ. ಆವರಣದಲ್ಲಿ ಎಲ್ಲೆಂದರಲ್ಲಿ ಕಸ ವಿಲೇವಾರಿ ಮಾಡಿ ರಾಶಿ ಸೃಷ್ಟಿಯಾಗಿದ್ದರೂ ತೆರವಿಗೆ ಮುಂದಾಗಿಲ್ಲ. ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕರೂ ಈ ಬಗ್ಗೆ ಗಂಭೀರವಾಗಿ ಚಿಂತಿಸಿಲ್ಲ.
ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷೆ ಎಚ್.ಎಂ. ಗಂಗಮ್ಮ ಶುಕ್ರವಾರ ಪಿಯು ಕಾಲೇಜಿನ ಕಾರ್ಯಕ್ರಮಕ್ಕೆ ಆಗಮಿಸಿದಾಗ ಪ್ರೌಢಶಾಲೆ ವಿಭಾಗದಲ್ಲಿನ ಅವ್ಯವಸ್ಥೆ ಗಮನಿಸಿದ್ದಾರೆ.
ಈ ಬಗ್ಗೆ ಶಿಕ್ಷಕರನ್ನು ಪ್ರಶ್ನಿಸಿದಾಗ ಶಾಲೆ ಪ್ರಾರಂಭವಾಗಿ ಇಷ್ಟು ದಿನ ಕಳೆದರೂ ಶಾಲಾ ಸಮಿತಿಯ ಯಾವೊಬ್ಬ ಸದಸ್ಯರೂ ಶಾಲೆಯತ್ತ ಆಗಮಿಸಿಲ್ಲ ಎಂಬ ಉತ್ತರ ಲಭ್ಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!