ಕಳೆನಾಶಕ ಕುಡಿದು ವ್ಯಕ್ತಿ ಆತ್ಮಹತ್ಯೆ
ಚಿಕ್ಕಮಗಳೂರು: ಸಾಲವನ್ನು ತೀರಿಸಲು ಆಗದೇ ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಯಿಗೆರೆಯಲ್ಲಿ ನಡೆದಿದೆ.
ದಾಮೋದರ್ (50) ಮೃತಪಟ್ಟವರು. ದಾಮೋದರ್, ಊರಿನಲ್ಲಿ ಕೆಲವು ಜನರ ಹತ್ತಿರ ಸಾಲ ಮಾಡಿಕೊಂಡಿದ್ದು, ಸಾಲ ತೀರಿಸಲು ಆಗದೇ ಜೀವನದಲ್ಲಿ ಜಿಗುಪ್ಸೆಗೊಂಡು ಕಳೆನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಮೃತರ ಮಗ ಮೋಹನ್ ಆಲ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.