ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿದ್ಯಾರ್ಥಿಗಳು ಪಠ್ಯಕ್ಕೇ ಸೀಮಿತವಾಗದಿರಲಿ

Rashmi Kasaragodu
Updated On : 31 Jul 2014, 12:24 pm

ಶೃಂಗೇರಿ: ವಿದ್ಯಾರ್ಥಿಗಳು ಕೇವಲ ಪುಸ್ತಕ ಜ್ಞಾನಕ್ಕೆ ಸೀಮಿತವಾಗಿರದೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕನ್ನಡ ಪ್ರಾಧ್ಯಾಪಕ ಕೆ.ಎಸ್. ವೆಂಕಪ್ಪ ಹೇಳಿದರು.
ತಾಲೂಕಿನ ಕಲ್ಟಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಆಯೋಜಿಸಿದ್ದ ಎಳೆಯರೊಳಗೊಂದಾಗು ಹರೆಯದಲ್ಲಿ ವಿಶೇಷ ಕಾರ್ಯಚಟುವಟಿಕೆಗಳ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕ್ರೀಡೆ, ಸಾಂಸ್ಕೃತಿಕ, ಪರಿಸರ ಸಂರಕ್ಷಣೆ, ಸಮಾಜಸೇವೆ ಇತ್ಯಾದಿ ಕ್ಷೇತ್ರದಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಆಸಕ್ತಿ ವಹಿಸಬೇಕು. ಆತ್ಮಶಕ್ತಿ, ಆತ್ಮವಿಶ್ವಾಸದಿಂದ ತೊಡಗಿಸಿಕೊಂಡಲ್ಲಿ ಭವಿಷ್ಯದ ದಿನಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು ಸಾರ್ಥಕ ಜೀವನ ನಡೆಸಬಹುದು. ಜತೆಗೆ ಸಮಾಜದ ಮುಖ್ಯವಾಹಿನಿಯಲ್ಲಿ ಗುರಿಸಿಕೊಳ್ಳಬಹುದು ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಮಂಗಲಿ ಆನಂದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ದಿನಗಳಲ್ಲಿ ಪಠ್ಯ ಚಟುವಟಿಕೆಗಳ ಜತೆಗೆ ಪಠ್ಯೇತರ ಚಟುವಟಿಕೆಗಳತ್ತಲೂ ಆಸಕ್ತಿ ವಹಿಸಬೇಕು. ಇದರಿಂದ ತಮ್ಮಲ್ಲಿ ಅಡಗಿರುವ ಪ್ರತಿಭೆ ಹೊರಹಾಕಬಹುದು ಎಂದರು.
ಮುಖ್ಯ ಅತಿಥಿಗಳಾಗಿ ಶಾಂತಾ, ಶ್ರೀನಿವಾಸ್, ಆದಿತ್ಯ ಬಿ.ಎಸ್. ಮತ್ತಿತರರು ಉಪಸ್ಥಿತರಿದ್ದರು. ಅಭಿರಾಮ್ ಸ್ವಾಗತಿಸಿದರು.ನಾಗೇಂದ್ರ ಪ್ರಸಾದ್ ನಿರೂಪಿಸಿ, ಸುನೀಲ್‌ಕುಮಾರ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement