ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಇನಾಂ ಭೂಮಿ: ಎಂಪಿಕೆ ನಿಲುವು ತಿಳಿಸಲಿ'

Lingaraj Badiger
Updated On : 2 Jun 2014, 11:55 am

ಕ.ಪ್ರ.ವಾರ್ತೆ, ಮೂಡಿಗೆರೆ, ಜೂ. 1
ಕಳಸ ಇನಾಂ ಭೂಮಿ ಸಮಸ್ಯೆ ಕುರಿತು ಜನರ ದಿಕ್ಕು ತಪ್ಪಿಸುತ್ತಿರುವ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಉವರು ತಮ್ಮ ನಿಲುವು ಏನು ಎಂಬುದನ್ನು ಪ್ರಕಟಿಸಲಿ ಎಂದು ಕಾಂಗ್ರೆಸ್ ವಕ್ತಾರ ಹಾಗೂ ಜಿಪಂ ಸದಸ್ಯ ಎಂ.ಎಸ್. ಅನಂತ್ ಆಗ್ರಹಿಸಿದ್ದಾರೆ.
ಮಾಜಿ ಶಾಸಕರು ವಾಸ್ತವಿಕ ನೆಲೆಯಲ್ಲಿ ಆಲೋಚಿಸುವ ಬದಲು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರಕಾರ, ಬಳಿಕ 5 ವರ್ಷದ ಬಿಜೆಪಿ ನೇತೃತ್ವದ ಸರಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಇನಾಂ ಭೂಮಿ ಸಮಸ್ಯೆ ಕುರಿತು ಕಾಳಜಿ ವಹಿಸಲಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ.
ಇನಾಂ ಭೂಮಿ ರೈತರನ್ನು ಯಥಾಸ್ಥಳದಲ್ಲಿ ಉಳಿಸಿಕೊಳ್ಳಲು ಹೈಕೋರ್ಟಿಗೆ ಅಫಿಡವಿಟ್ ಸಲ್ಲಿಸಲು ಅಥವಾ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲು ಬಿಜೆಪಿ ಸರ್ಕಾರ ಪ್ರಯತ್ನಿಸಲಿಲ್ಲವೇಕೆ ಎನ್ನುವುದನ್ನು ಸ್ಪಷ್ಟಪಡಿಲಿಸಲಿ ಎಂದು ಒತ್ತಾಯಿಸಿದ್ದಾರೆ.
ಸಮಸ್ಯೆ ಪರಿಹರಿಸುವ, ಜನರನ್ನು ಯಥಾಸ್ಥಳದಲ್ಲಿ ಉಳಿಸಿಕೊಳ್ಳುವ ಮಾರ್ಗೋಪಾಯ, ಸೂಕ್ತ ಸಲಹೆಗಳನ್ನು ಕುಮಾರಸ್ವಾಮಿಯವರು ನೀಡಲಿ. ಅಲ್ಲದೇ ಇನಾಂ ಭೂಮಿ ವಿಚಾರದಲ್ಲಿ ತಮ್ಮ ನಿಲುವು ಮತ್ತು ಕಾಳಜಿಯನ್ನು ಪ್ರಕಟಿಸಲಿ ಎಂದು ಪ್ರಕಟಣೆಯಲ್ಲಿ ಅನಂತ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement