ಬಸವ ಜಯಂತಿ
ಚಿಕ್ಕಮಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿಶ್ವಗುರು ಬಸವೇಶ್ವರ ಜಯಂತಿ ಆಚರಣಾ ಸಮಾರಂಭ ಸೋಮವಾರ ಬೆಳಗ್ಗೆ 11.30ಕ್ಕೆ ನಗರದ ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ಯುವಜನ ಸೇವಾ ಮತ್ತು ಮೀನುಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಸಿ.ಟಿ. ರವಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ವಿಧಾನಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಜಿಪಂ ಅಧ್ಯಕ್ಷೆ ಪದ್ಮಾ ಚಂದ್ರಪ್ಪ, ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ, ಶಾಸಕರಾದ ಡಿ.ಎನ್. ಜೀವರಾಜ್, ಬಿ.ಬಿ. ನಿಂಗಯ್ಯ, ವೈಎಸ್‌ವಿ ದತ್ತ, ಜಿ.ಎಚ್. ಶ್ರೀನಿವಾಸ್, ಮೋಟಮ್ಮ, ಎ.ವಿ. ಗಾಯತ್ರಿ ಶಾಂತೇಗೌಡ, ಎಂ. ಶ್ರೀನಿವಾಸ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ನಗರಸಭೆ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್, ಜಿಪಂ ಉಪಾಧ್ಯಕ್ಷೆ ಅನ್ನಪೂರ್ಣ ಚನ್ನಕೇಶವ, ತಾಪಂ ಅಧ್ಯಕ್ಷೆ ಅಂಬಿಕಾ ಶಿವಕುಮಾರ್ ಭಾಗವಹಿಸಲಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.