ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ತೋಟ ಮಾಲೀಕರ ಸಂಘದ ವಿರುದ್ಧ ಹೋರಾಟ

Vishwanath S
Updated On : 10 Jun 2014, 12:24 pm

ಕ.ಪ್ರ. ವಾರ್ತೆ, ಚಿಕ್ಕಮಗಳೂರು, ಜೂನ್ 9
ಕಾರ್ಮಿಕ ಸಂಘಟನೆ ರಾಜ್ಯದಾದ್ಯಂತ ಅತ್ಯಂತ ಕ್ರಿಯಾಶೀಲವಾಗಿದೆ. ಜಿಲ್ಲೆಯಲ್ಲಿಯೂ ಹೆಚ್ಚಿನ ಕಾರ್ಮಿಕರು ಸಂಘಟನೆಯಲ್ಲಿ ತೊಡಗಿಸಿ ಕೊಳ್ಳಬೇಕು ಎಂದು ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಕೆ. ಗುಣಶೇಖರ್ ತಿಳಿಸಿದರು.
ನಗರದ ತಮಿಳು ಕಾಲೋನಿಯ ಅಂಬೇಡ್ಕರ್ ಭವನದಲ್ಲಿ ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ಸೋಮವಾರ ಏರ್ಪಡಿಸಿದ್ದ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಮಿಕ ಮುಖಂಡರ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
 ರಾಜ್ಯ ಸರ್ಕಾರ ಜಾರಿ ಮಾಡಿರುವ ಕನಿಷ್ಟ ವೇತನ ಹೆಚ್ಚಾಗಿದ್ದು, ಕಡಿಮೆ ಮಾಡಬೇಕೆಂದು ಹೈಕೋರ್ಟ್‌ಗೆ ಮನವಿ ಸಲ್ಲಿಸಿರುವ ತೋಟ ಮಾಲೀಕರ ಸಂಘದ ಅರ್ಜಿ ವಿರುದ್ಧ ಕಾನೂನು ಹೋರಾಟ ಮಾಡಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ಎಂ. ರೇಣುಕಾರಾಧ್ಯ ಮಾತನಾಡಿ, ತೋಟ ಕಾರ್ಮಿಕರಿಗೆ ಸರ್ಕಾರ ಪ್ರತಿಯೊಬ್ಬರಿಗೂ ಮನೆ ನೀಡಬೇಕು. ತೋಟ ಕಾರ್ಮಿಕರ ಮಕ್ಕಳಿಗೆ ಸಿಇಟಿ ಆಯ್ಕೆ ಅತ್ಯಂತ ಕಷ್ಟವಾಗಿದ್ದು, ಇದಕ್ಕೆ ಪರಿಹಾರವಾಗಿ ವಿಶೇಷ ಮೀಸಲಾತಿ ಕಲ್ಪಿಸಬೇಕು. ಭವಿಷ್ಯ ನಿಧಿ ತಲುಪಿಸುವಲ್ಲಿ ವಿಫಲವಾದ ಕಾರ್ಮಿಕ ಅಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಕಾರ್ಮಿಕರಿಗೆ ರು. 3 ಸಾವಿರ  ನಿವೃತ್ತಿ ವೇತನ, ಗುತ್ತಿಗೆ ಆಧಾರದ ಕೆಲಸಗಳನ್ನು ನಿಲ್ಲಿಸಿ ಕಾಯಂ ಕಾರ್ಮಿಕರಿಗೆ ನೀಡುವ ಸೌಲಭ್ಯಗಳನ್ನು ನೀಡಬೇಕು ಎಂಬ ಬೇಡಿಕೆಗಳನ್ನು ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಉಪಾಧ್ಯಕ್ಷ ಬಿ. ರಮೇಶ್, ಜಿಲ್ಲಾ ತೋಟ ಕಾರ್ಮಿಕ ಸಂಘದ ಕಾರ್ಯದರ್ಶಿ ಎನ್.ಸಿ. ಓಬಯ್ಯ, ಧರ್ಮರಾಜ್, ಜಾರ್ಜ್, ರಘು, ಮಣಿ ಹಾಗೂ ಕಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement