ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಡಿಸಿಎಂಸಿ ಪಪೂ ಕಾಲೇಜು ಉದ್ಘಾಟನೆ

Rashmi Kasaragodu
Updated On : 20 Jun 2014, 11:56 am

ನರಸಿಂಹರಾಜಪುರ: ಡಿಸಿಎಂಸಿ ಪ್ರೌಢ ಶಾಲೆ ಆವರಣದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಡಿಸಿಎಂಸಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಡಿಸಿಎಂಸಿ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಎಚ್.ಟಿ.ರಾಜೇಂದ್ರ ಮಾತನಾಡಿ, ಹಲವು ವರ್ಷಗಳಿಂದ ಪ್ರೌಢ ಶಾಲೆಯ ಉತ್ತಮ ಗುಣ ಮಟ್ಟದ ಶಿಕ್ಷಣ ನೀಡುತ್ತ ಬಂದಿದೆ. ಈಗ ಪದವಿ ಪೂರ್ವ ಕಾಲೇಜು ಪ್ರಾರಂಭಿಸುತ್ತಿದ್ದು ಪೋಷಕರ ಸಹಕಾರ ಅಗತ್ಯ ಎಂದರು.
ಅತಿಥಿಯಾಗಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಿಜಾಮುದ್ದೀನ್ ಮಾತನಾಡಿದರು. ಪದವಿ ಪೂರ್ವ ಕಾಲೇಜಿನ ನಿಕಟಪೂರ್ವ ಅಧ್ಯಕ್ಷ ಡಿ.ಸಿ.ದಿವಾಕರ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಎಲ್.ಎಂ.ಸತೀಶ್, ಪ್ರಾಂಶುಪಾಲ ಪದ್ಮರಮೇಶ್ ಉಪಸ್ಥಿತರಿದ್ದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement