ಮಿನಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ
ಚಿಕ್ಕಮಗಳೂರು: ನಗರದಲ್ಲಿ ಏರ್‌ಸ್ಟ್ರಿಪ್(ಮಿನಿ ವಿಮಾನ ನಿಲ್ದಾಣ) ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಶಾಸಕ ಸಿ.ಟಿ. ರವಿ ಅವರು ಕೇಂದ್ರದ ರಾಜ್ಯ ವಿಮಾನಯಾನ ಖಾತೆಯ ರಾಜ್ಯ ಸಚಿವರಾದ ಜಿ.ಎಂ. ಸಿದ್ದೇಶ್ವರ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಚಿಕ್ಕಮಗಳೂರು ರಾಜ್ಯದ ಪ್ರವಾಸೋದ್ಯಮ ಕೇಂದ್ರಗಳಲ್ಲಿ ಒಂದಾಗಿದ್ದು, ದೇಶ- ವಿದೇಶಗಳಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಸಾರ್ವಜನಿಕರಿಗೆ ಏರ್‌ಸ್ಟ್ರಿಪ್(ಮಿನಿ ವಿಮಾನ ನಿಲ್ದಾಣ)ನ ಅವಶ್ಯಕತೆ ಇದೆ. ಆದ್ದರಿಂದ ಮಿನಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂದು ತಿಳಿಸಿದರು.
ಈ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಏರ್‌ಸ್ಟ್ರಿಪ್‌ಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಮುಖಾಂತರ ಸಲ್ಲಿಸಲು ತಿಳಿಸಿದರು.
ಶಾಸಕ ಸಿ.ಟಿ. ರವಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಚಿಕ್ಕಮಗಳೂರು ನಗರಕ್ಕೆ ಏರ್‌ಸ್ಟ್ರಿಪ್‌ನ ಅವಶ್ಯಕತೆ ವಿವರಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಮನವಿ ಮಾಡಿದರು.