ವಿದ್ಯಾರ್ಥಿವೇತನ
ಚಿಕ್ಕಮಗಳೂರು: ನಗರದ ಶಾರದಾ ಪೈ ಕಲ್ಯಾಣ ಮಂಟಪ ಸಂಸ್ಥೆಯ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ನೀಡಲಾಗುವುದು.
1ನೇ ತರಗತಿಯಿಂದ 10ನೇ ತರಗತಿಯವರಗೆ ವ್ಯಾಸಂಗ ಮಾಡುವ ಸಮಾಜದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಅರ್ಜಿ ಫಾರಂಗಳನ್ನು ಶಾರದಾ ಪೈ ಕಲ್ಯಾಣ ಮಂಟಪದ ಕಚೇರಿ ವೇಳೆಯಲ್ಲಿ ಪಡೆಯಬಹುದು ಎಂದು ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.