ದತ್ತ ಸಾಧನೆಗೆ ಕಾಂಗ್ರೆಸ್ಸಿಗರಿಂದಲೇ ಪ್ರಶಂಸೆ: ಮಂಜುನಾಥ
ಕಡೂರು: ಕ್ಷೇತ್ರದ ಶಾಸಕ ವೈಎಸ್‌ವಿ ದತ್ತ ಅವರ ಒಂದು ವರ್ಷದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿ ವಿಚಾರದ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಮುಖಂಡರೇ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇನ್ನೂ ನಾಲ್ಕು ವರ್ಷದ ಅವಧಿಯಲ್ಲಿ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವ ಮೂಲಕ ಶಾಸಕರು ನೂರಕ್ಕೆ ನೂರು ಅಂಕ ಗಳಿಸಿ ಜನರ ಪ್ರೀತಿ ಗಳಿಸಲಿದ್ದಾರೆ ಎಂದು ಜಿಲ್ಲಾ ಯುವ ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ಎನ್.ಪಿ. ಮಂಜುನಾಥ ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.