ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅರಣ್ಯಹಕ್ಕು ಮಾನ್ಯ ಮಾಡಲು ಜಿಲ್ಲಾಧಿಕಾರಿ ಸೂಚನೆ

Rashmi Kasaragodu
Updated On : 27 Jun 2014, 11:39 am

ಚಿಕ್ಕಮಗಳೂರು: ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯಹಕ್ಕು ಮಾನ್ಯ ಮಾಡುವ ಸಂಬಂಧ ಅರ್ಜಿಗಳನ್ನು ಪಡೆದು ಶೀಘ್ರದಲ್ಲಿಯೇ ಹಕ್ಕುಪತ್ರ ನೀಡಬೇಕೆಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಹೇಳಿದ್ದಾರೆ.
ತಮ್ಮ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರಣ್ಯ ಹಕ್ಕು ಪತ್ರ ಮಂಜೂರಾತಿಗಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವವರಿಗೆ ಶೀಘ್ರದಲ್ಲಿಯೇ ಅರಣ್ಯ ಹಕ್ಕುಪತ್ರಗಳನ್ನು ನೀಡಬೇಕು. ಹೊಸದಾಗಿ ಅರಣ್ಯ ಹಕ್ಕು ಪತ್ರ ಮಂಜೂರಾತಿಗಾಗಿ ಅರ್ಜಿಗಳನ್ನು ಜೂ. 30ರೊಳಗೆ ಸಾರ್ವಜನಿಕರಿಂದ ಪಡೆಯಬೇಕೆಂದರು. ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಕಾಯ್ದೆಯನ್ನು ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸಮನ್ವಯದೊಂದಿಗೆ ಅನುಷ್ಠಾನಗೊಳಿಸಬೇಕೆಂದರು.
ಪ್ರತಿ ಗ್ರಾಮ ಸಭೆಯಲ್ಲೂ ಪಂಚಾಯತ್ರಾಜ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದು, ಅರಣ್ಯ ಹಕ್ಕುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದರು.
ಅರಣ್ಯ ಹಕ್ಕುಪತ್ರಗಳನ್ನು ಪಡೆದು ವಾಸಿಸುತ್ತಿರುವ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಬೀದಿ ದೀಪ, ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.
ಸಭೆಯಲ್ಲಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ.ಎಸ್. ರಂಗನಾಥ್, ಸದಸ್ಯರುಗಳಾದ ಜೆ.ಡಿ. ಲೋಕೇಶ್, ಕವಿತಾ ಬಿ.ಚಂದ್ರು ಹಾಗೂ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಲಲಿತಾ ಬಾಯಿ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement