ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿಗೆ ಆದ್ಯತೆ ನೀಡಿ
ಕ.ಪ್ರ.ವಾರ್ತೆ , ಕಡೂರು , ಮಾ. 1
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಪರಿಶಿಷ್ಟ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ಸೇರಿದಂತೆ ಎಲ್ಲಾ ರೀತಿಯ ಸವಲತ್ತು ನೀಡಿ ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ ನಡೆಸಿದ್ದು, ಈಗಿನ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮಾಜಿ ಸಚಿವ ನಾರಾಯಣಸ್ವಾಮಿ ಒತ್ತಾಯಿಸಿದರು.
ಪಟ್ಟಣದಲ್ಲಿ ದೇವಾಲಯ ಸಮಾರೋಪ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರನ್ನು ಬರಮಾಡಿಕೊಂಡು ಪ್ರವಾಸಿ ಮಂದಿರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ ಮಾತನಾಡಿದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ಎ. ಮಣಿ, ಕೆ.ಎಚ್. ಶಂಕರ್, ತಾಪಂ ಸದಸ್ಯ ಆರ್. ಶಿವಕುಮಾರ್, ಪುರಸಭಾ ಸದಸ್ಯ ರಾಜೇಶ್, ವರದರಾಜ್, ಕೆ.ಎನ್. ಗೋಪಿಕುಮಾರ್, ಶಿವಶಂಕರ್, ಬಂಕ್ ಮಂಜು, ರವಿಶಂಕರ್, ಕಂಡಿ ಮಂಜುನಾಥ್ ಇದ್ದರು.