ಅತ್ಯಾಚಾರ ಯತ್ನ: ಆರೋಪಿ ಸೆರೆ
ಮೂಡಿಗೆರೆ: ತಾಲೂಕಿನ ಕಳಸ ಕಂಚಿನಕೆರೆ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋ ಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳಸ ಕಂಚಿನಕೆರೆಯಲ್ಲಿ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಪೊದೆಯೊಳಗೆ ಕರೆದುಕೊಂಡು ಹೋದ ಲಾರಿ ಕ್ಲೀನರ್ ಪ್ರಕಾಶ್ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದು, ಬಾಲಕಿ ಕೂಡಲೇ ಕೂಗಿಕೊಂಡಿದ್ದಾಳೆ. ಇದರಿಂದ ಹೆದರಿದ ಆರೋಪಿ ಬಾಲಕಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾನೆ.
ಬಾಲಕಿ ತಾಯಿ ಕೊಟ್ಟ ದೂರಿನನ್ವಯ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪೆಟ್ರೋಲ್ ಬಂಕ್ವೊಂದರ ಬಳಿ ಅಡಗಿದ್ದ ಆರೋಪಿ ಪ್ರಕಾಶ್ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮುಂದುವರಿಸಿದ್ದಾರೆ. ಈ ಕುರಿತು ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.