'ಖಾಲಿ ಹುದ್ದೆ ಶೀಘ್ರ ಭರ್ತಿ'
ಚಿಕ್ಕಮಗಳೂರು: ವಾರ್ತಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಸದ್ಯದಲ್ಲೇ ಭರ್ತಿ ಮಾಡಲಾಗುವುದು ಎಂದು ರಾಜ್ಯ ವಾರ್ತಾ ಸಚಿವ ರೋಷನ್ ಬೇಗ್ ಹೇಳಿದ್ದಾರೆ.
ಚಿಕ್ಕಮಗಳೂರು ಪ್ರೆಸ್ ಕ್ಲಬ್ನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶದ ಮಾದರಿಯಲ್ಲಿ ವಿಧಾನಸೌಧದ ಬಳಿ ಸುಮಾರು 5 ಕೋಟಿ ವೆಚ್ಚದಲ್ಲಿ ಮೀಡಿಯಾ ಸೆಂಟರ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.
ಎಟಿಎಂನಲ್ಲಿ ಆತ್ಮಹತ್ಯೆ
ಆಯನೂರು: ಇಲ್ಲಿನ ತಾಂಡದ ತುಕಾರಾಂ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಕುಡಿದು ಚೋರಡಿಯ ಎಸ್ಬಿಐ ಎಟಿಎಂನಲ್ಲಿ ಮಲಗಿದ್ದ ಅವರನ್ನು ಯಾರೂ ಗಮನಿಸಿರಲಿಲ್ಲ. ಎಟಿಎಂ ಭದ್ರತೆ ಕೆಲಸ ಮಾಡುವವರು ಅನುಮನಾಸ್ಪದವಾಗಿ ಪರಿಶೀಲಿಸಿಲಿದಾಗ ವಿಷಯ ಗೊತ್ತಾಯಿತು.