ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಪಠ್ಯಕ್ರಮದಲ್ಲಿ ಬದಲಾವಣೆ ಇಲ್ಲ: ಸಚಿವ ರತ್ನಾಕರ್

Rashmi Kasaragodu
Updated On : 3 Mar 2014, 11:40 am

ತರೀಕೆರೆ: ಪಠ್ಯಕ್ರಮದಲ್ಲಿ ಯಾವುದೇ ರೀತಿಯ ಬದಲಾವಣೆ ಮಾಡುವುದಿಲ್ಲ ಎಂದು ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಕಿಮ್ನನೆ ರತ್ನಾಕರ್ ತಿಳಿಸಿದ್ದಾರೆ.
ಅವರು, ಸುದ್ದಿಗಾರರೊಡನೆ ಮಾತನಾಡುತ್ತಿದ್ದರು.
ಪಠ್ಯ ಕ್ರಮವನ್ನು ಬದಲಾವಣೆ ಮಾಡುವುದರಿಂದ ವಿದ್ಯಾರ್ಥಿಗಳಿಗೂ ಬೋಧಕರಿಗೂ ವಿನಾಕಾರಣ ತೊಂದರೆಯಾಗುತ್ತದೆ, ಶಿಕ್ಷಣ ವ್ಯವಸ್ಥೆಯನ್ನು ಉತ್ತಮಗೊಳಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಜೂನ್ ತಿಂಗಳಿನಲ್ಲೇ ಪಠ್ಯಪುಸ್ತಕಗಳನ್ನು ವಿತರಿಸಲಾಗುವುದು. ರಾಜ್ಯದಲ್ಲಿ 16 ಸಾವಿರ ಜನ ಪತಿ ಪತ್ನಿಯರು ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದು ಜಿಲ್ಲಾವಾರು ಯೂನಿಟ್‌ನಲ್ಲಿ ಅವರು ಕರ್ತವ್ಯ ನಿರ್ವಹಿಸುವಂತೆ ವ್ಯವಸ್ಥೆ ಮಾಡುವ ಆಶಯವನ್ನು ಸರ್ಕಾರ ಹೊಂದಿದೆ ಎಂದ ಅವರು ತಿಳಿಸಿದರು.
ಶಾಸಕ ಜಿ.ಎಚ್.ಶ್ರೀನಿವಾಸ್, ತಾ.ಪಂ.ಅಧ್ಯಕ್ಷೆ ಶಕುಂತಲ ನಾಗರಾಜ್, ಜಿ.ಪಂ.ಮಾಜಿ ಅಧ್ಯಕ್ಷ ಕೆ.ಆರ್.ದೃವಕುಮಾರ್, ಬಿ.ಎಸ್.ಆರ್.ಮಂಜುನಾಥ್, ಅಬ್ಲುಲ್ ಘನಿ ಅನ್ವರ್, ಪುರಸಭಾ ಸದಸ್ಯರಾದ ಧರ್ಮರಾಜ್, ನಾಗರಾಜ್,ಪದ್ಮರಾಜ್, ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement