ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ

Lingaraj Badiger
Updated On : 7 Mar 2014, 11:20 am

ಚಿಕ್ಕಮಗಳೂರು: ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಮಕ್ಕಳು ಶಾಲೆಗೆ ಕೀರ್ತಿ ತರಬೇಕೆಂದು ಮೂಡಿಗೆರೆ ಶಾಸಕ ಬಿ.ಬಿ. ನಿಂಗಯ್ಯ ಹೇಳಿದರು.
ಮಲ್ಲಂದೂರಿನ ಬಿಪಿಬಿ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ 2013- 14ನೇ ಸಾಲಿನ ಕರ್ನಾಟಕ ಸರ್ಕಾರ ಯೋಜನೆಯನ್ವಯ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈ ಶಾಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮವಾಗಿದ್ದು, ವಿದ್ಯಾರ್ಥಿಗಳು ಪೋಷಕರಿಗೆ ಮತ್ತು ಶಿಕ್ಷಕರಿಗೆ ಗೌರವ ತಂದುಕೊಡುವಂತೆ ನಡೆದುಕೊಳ್ಳಬೇಕೆಂದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರು ಶಿಕ್ಷಣದಲ್ಲಿ ಸಮಾನತೆ ತರಬೇಕೆಂಬುದು ಅವರ ಆಶಯವಾಗಿತ್ತು ಎಂದರು.
ಖಾಂಡ್ಯದ ನಾಗರಾಜ, ತಾಪಂ ಸದಸ್ಯ ಎನ್.ಎಂ. ಮಂಜುನಾಥ, ಗ್ರಾಪಂ ಸದಸ್ಯ ಶೇಖರ್ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲ್ ಅಧ್ಯಕ್ಷತೆ ವಹಿಸಿದ್ದರು. ಧನರಾಜ್ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಎಚ್.ಎಸ್. ಮಂಜುನಾಥ್ ಸ್ವಾಗತಿಸಿದರು. ಸಹ ಶಿಕ್ಷಕ ಪ್ರಶಾಂತ್ ನಿರೂಪಿಸಿ, ಶಾಜಿಯಾ ಅಫ್ರೀನ್ ವಂದಿಸಿದರು.
--
ಅರಣ್ಯ ನಿವಾಸಿಗಳಿಗೆ ಹಕ್ಕು ಪತ್ರ: ಬ್ಲಾಕ್ ಕಾಂಗ್ರೆಸ್ ಸ್ವಾಗತ
ಕ.ಪ್ರ.ವಾರ್ತೆ, ಮೂಡಿಗೆರೆ, ಮಾ.6 ರಾಜ್ಯ ಸಚಿವ ಸಂಪುಟದಲ್ಲಿ ಅರಣ್ಯ ನಿವಾಸಿಗಳ ಹಕ್ಕು ನೀಡುವಲ್ಲಿ ಅರಣ್ಯ ಹಕ್ಕು ಸಮಿತಿ ರಚಿಸಿ ಅರಣ್ಯ ನಿವಾಸಿಗಳಿಗೆ ಅರಣ್ಯ ಹಕ್ಕು ನೀಡುವಲ್ಲಿ ರಾಜ್ಯ ಸಚಿವ ಸಂಪುಟ ತೆಗೆದುಕೊಂಡ ತೀರ್ಮಾನವನ್ನು ಕಳಸ ಬ್ಲಾಕ್ ಕಾಂಗ್ರೆಸ್ ಸಮಿತಿ ಸ್ವಾಗತಿಸಿದೆ ಎಂದು ಕಳಸ ಬ್ಲಾಕ್ ಕಾಂಗ್ರೆಸ್ ಸಮಿತಿ ವಕ್ತಾರ ಎನ್.ಎಂ. ಹರ್ಷ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಬುಡಕಟ್ಟು ಜನಾಂಗ ಹಾಗೂ ಇತರೆ ಸಾಂಪ್ರಾದಾಯಿಕ ಅರಣ್ಯ ವಾಸಿಗಳ ಹಕ್ಕು ಕಾಯ್ದೆಯಡಿಯಲ್ಲಿ ರಾಜ್ಯದಲ್ಲಿ ಕೇವಲ 14 ಭಾಗದ ಅರ್ಜಿದಾರರಿಗೆ ಮಾತ್ರ ಹಕ್ಕು ನೀಡಿದ್ದು, ಉಳಿದ 86 ಭಾಗ ಅರ್ಜಿದಾರರಿಗೆ ಈ ಹಕ್ಕು ನೀಡಲು ವಿಫಲವಾಗಿದ್ದರಿಂದ ಬಹಳ ಜನರು ಸಮಸ್ಯೆಗೆ ಸಿಲುಕಿದ್ದರು ಎಂದರು.
ರಾಜ್ಯ ಸಚಿವ ಸಂಪುಟದ ತೀರ್ಮಾನವೂ ಜನರ ಸಮಸ್ಯೆ ಬಗೆಹರಿಸುವುದರಲ್ಲಿ ಪೂರಕವಾಗಿದೆ.
ಈ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ, ಸಂಸದ ಜಯಪ್ರಕಾಶ್ ಹೆಗ್ಡೆಯವರಿಗೆ, ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಕಳಸ ಬ್ಲಾಕ್ ಕಾಂಗ್ರೆಸ್ಸ್‌ಮಿತಿ ಕೃತಜ್ಞತೆ ಸಲ್ಲಿಸಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement