ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅಗ್ನಿ ಆಕಸ್ಮಿಕ: ಲಕ್ಷಾಂತರ ರು. ನಷ್ಟ

Lingaraj Badiger
Updated On : 7 Mar 2014, 11:21 am

ಮೂಡಿಗೆರೆ: ತಾಲೂಕಿನ ಕಳಸ ಪಟ್ಟಣದ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರು. ನಷ್ಟವಾದ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ.
ಕಳಸ ಕೆ.ಎಂ. ರಸ್ತೆಯಲ್ಲಿರುವ ರಾಜು ಪೂಜಾರಿ ಎಂಬುವವರಿಗೆ ಸೇರಿದ ದಿನಸಿ ಅಂಗಡಿಯಲ್ಲಿ ಹೊಗೆಯಾಡುತ್ತಿದ್ದನ್ನು ಗಮನಿಸಿದ ಸ್ಥಳೀಯರು ಪಟ್ಟಣದ ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸಿದರು.
ತಕ್ಷಣ ಸ್ಥಳಕ್ಕೆ ಠಾಣಾಧಿಕಾರಿ ರಾಮಚಂದ್ರ ನಾಯಕ್, ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಆಗಮಿಸಿದರು. ಆ ಹೊತ್ತಿಗಾಗಲೇ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡು ಅಂಗಡಿ ಬಹುತೇಕ ಸುಟ್ಟುಹೋಗಿ ಪಕ್ಕದಲ್ಲಿಯೇ ಇದ್ದ ರವಿ ಎಂಬುವವರ ಅಂಗಡಿಗೂ ಬೆಂಕಿ ಹರಡಿ ಉರಿಯಲಾರಂಬಿತು.
ಕೂಡಲೇ ಸ್ಥಳೀಯರ ನೆರವಿನಿಂದ ಅಂಗಡಿಯ ಬೀಗ ಒಡೆದು ನೀರು ಹಾಕಿ ಬೆಂಕಿ ನಂದಿಸುವಲ್ಲಿ ಸಫಲರಾದರು.
ಸಮಯಕ್ಕೆ ಬಾರದ ಅಗ್ನಿ ಶಾಮಕ: ತಾಲೂಕು ಕೇಂದ್ರದಲ್ಲಿರುವ ಅಗ್ನಿಶಾಮಕ ದಳಕ್ಕೂ ಸುದ್ದಿ ಮಟ್ಟಿಸಲಾಯಿತು. ಆದರೆ ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪುವಷ್ಟರಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿತ್ತು.
ಘಟನೆಗೆ ನಿರ್ದಿಷ್ಟ ಕಾರಣವೇನೆಂದು ತಿಳಿದು ಬಂದಿಲ್ಲ. ಪ್ರಕರಣ ಕಳಸ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement