ಪರಂಪರೆ ಉಳಿಸಿ
ಶೃಂಗೇರಿ: ಜೀವನವೇ ಒಂದು ಕಲೆ, ಕಲಾತ್ಮಕತೆಯಿಲ್ಲದೆ ಮನುಷ್ಯ ಬದುಕಲು ಸಾಧ್ಯವಿಲ್ಲ. ಸಾಹಿತ್ಯ, ಕಲೆ ಮನುಷ್ಯ ಜೀವನದ ಅವಿಭಾಜ್ಯ ಅಂಗ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ. ಕೆ. ಪುಟ್ಟಯ್ಯ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇದು ಆವರಣದಲ್ಲಿ ಕಲಾ ಸಂಘದ ಆಶ್ರಯದಲ್ಲಿ 3 ದಿನಗಳ ಕಾಲ ಆಯೋಜಿಸಿರುವ ಕಲಾ ಉತ್ಸವ 2014 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ಸಂಸ್ಕೃತಿ, ಪರಂಪರೆ ತನ್ನದೇ ಆದ ಇತಿಹಾಸ, ಪ್ರಾಚಿನತೆಯನ್ನು ಹೊಂದಿದೆ. ಇದು ಜಗತ್ತಿನಲ್ಲಿಯೇ ವಿಶಿಷ್ಠತೆಯನ್ನು ಹೊಂದಿದೆ. ಇಂತಹ ಶ್ರೀಮಂತ, ಭವ್ಯ ಪರಂಪರೆಯನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಮುಂದುವರೆಸಿಕೊಂಡು ಹೋಗಬೇಕಿದೆ. ವಿದ್ಯಾರ್ಥಿಗಳು ಇಂತಹ ಕಲಾ ಸಂಘಗಳನ್ನು ರಚಿಸಿಕೊಂಡು ದೇಶದ ಸಂಸ್ಕೃತಿ, ಪರಂಪರೆ ಉಳಿಸಲು ಪ್ರಯತ್ನಿಸಬೇಕು ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.