ಮತದಾನ ಜಾಗೃತಿ ಕಾರ್ಯಕ್ರಮ
ನರಸಿಂಹರಾಜಪುರ: ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೂ ಸರ್ಕಾರದ ಸೌಲಭ್ಯ ದೊರೆಯಬೇಕಾದರೆ ಸರ್ಕಾರದ ಪ್ರತಿನಿಧಿಗಳು ಕೇವಲ ಭಾಷಣ ಮಾಡುವುದಕ್ಕಿಂತ ಸರ್ಕಾರದ ಘೋಷಣೆಗಳನ್ನು ಕಾರ್ಯರೂಪಕ್ಕೆ ತರಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ.ಕೆ. ಉಮೇಶ್ ತಿಳಿಸಿದರು. ಅವರು ಗುರುವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಚೇತನ ಸಂಸ್ಥೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಿತ್ತಿಪತ್ರ ಬಿಡುಗಡೆ ಮಾಡಿ ಮಾತನಾಡಿದರು. ಉಪನ್ಯಾಸಕ ಅಬ್ದುಲ್ ವಹಾಬ್ ಮಾತನಾಡಿದರು. ಯವ ಚೇತನ ಸಂಸ್ಥೆ ಅಧ್ಯಕ್ಷ ರೋಬಿನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಕಾರ್ಯವಿಭಾಗದ ಉಪನ್ಯಾಸಕ ರಾಘವೇಂದ್ರಇದ್ದರು.