ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸರ್ಕಾರಿ ಶಾಲೆ ಬೆಳವಣಿಗೆಗೆ ಬೆಂಬಲ ಅಗತ್ಯ

Rashmi Kasaragodu
Updated On : 8 Mar 2014, 11:53 am

ಚಿಕ್ಕಮಗಳೂರು: ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಸಾರ್ವಜನಿಕರು ಮತ್ತು ಪೋಷಕರ ಪ್ರೋತ್ಸಾಹ, ಬೆಂಬಲ ಅಗತ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಹೇಳಿದ್ದಾರೆ.
ನಗರದ ಹೊರ ವಲಯದ ಇಂದಿರಾನಗರ ಬಡಾವಣೆಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಹಿಳಾ ಜಾಗೃತಿ ಸಂಘದಿಂದ ಬಿಸಿಯೂಟಕ್ಕೆ ತಟ್ಟೆ, ಲೋಟ ವಿತರಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸರ್ಕಾರ ಶಾಲೆಗಳಿಗೆ ಅಗತ್ಯ ಕಟ್ಟಡ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದಕ್ಕಾಗಿ ಹೆಚ್ಚಿನ ಹಣವನ್ನು ವೆಚ್ಚ ಮಾಡುತ್ತಿದೆ. ಆದರೆ, ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಪೋಷಕರು ಕಳಿಸುತ್ತಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ತಿಳಿಸಿದರು.
ಅಧಿಕಾರಿಗಳಿಗೆ ಅಭಿನಂದನೆ: ದಾನಿಗಳು ಕೊಡುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ದಾನಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ನೆರವು ನೀಡಬೇಕು ಎಂದ ಅವರು, ಬಿಸಿಯೂಟಕ್ಕೆ ಅನುಕೂಲವಾಗಲಿ ಎಂದು ಮಹಿಳಾ ಜಾಗೃತಿ ಸಂಘದ ಸದಸ್ಯರು ತಟ್ಟೆ, ಲೋಟ ನೀಡುತ್ತಿರುವುದು ಒಳ್ಳೆಯ ಕಾರ್ಯವಾಗಿದೆ ಎಂದು ಪದಾಧಿಕಾರಿಗಳನ್ನು ಅಭಿನಂದಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement