ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಇಂದಿನಿಂದ ಯುಗಮಾನೋತ್ಸವ

Rashmi Kasaragodu
Updated On : 12 Mar 2014, 1:39 am

ಬಾಳೆಹೊನ್ನೂರು: ಮಲಯಾಚಲ ಪರ್ವತ ಶ್ರೇಣಿಯ ಭದ್ರಾನದಿ ತಟದಲ್ಲಿ ಜಗದ್ಗುರು ರೇಣುಕಾಚಾರ್ಯರಿಂದ ಸ್ಥಾಪಿತವಾದ ರಂಭಾಪುರಿಯಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದ ಧರ್ಮ ಸಮಾರಂಭಕ್ಕೆ ಬುಧವಾರ ವಿಧ್ಯುಕ್ತ ಚಾಲನೆ ದೊರೆಯಲಿದ್ದು, ಧರ್ಮ ಸಮಾರಂಭ ಆಚರಿಸಿಕೊಳ್ಳಲು ಪೀಠ ಸಜ್ಜಾಗಿ ನಿಂತಿದೆ.
ವರ್ಷಂಪ್ರತಿ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿಕೊಂಡು ಬರುತ್ತಿದ್ದು, ಕಾರ್ಯಕ್ರಮದ ಅಂಗವಾಗಿ ಜನಜಾಗೃತಿ ಧರ್ಮ ಸಮ್ಮೇಳನಗಳನ್ನು ನಡೆಸಲಾಗುತ್ತಿದೆ. ಸಮಾರಂಭದ ಸವಿನೆನಪಿಗಾಗಿ ಪ್ರತೀ ವರ್ಷ ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ, ಸಾಧಕರಿಗೆ ಮನ್ನಣೆ ನೀಡಲಾಗುತ್ತಿದೆ. ಬುಧವಾರದಿಂದ ಐದು ದಿನಗಳ ಕಾಲ ನಡೆಯುವ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಜಾತ್ರಾ ಮಹೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವದಲ್ಲಿ ರಾಜ್ಯ ಹಾಗೂ ರಾಷ್ಟ್ರದ ವಿವಿಧೆಡೆಯ ನೂರಾರು ಭಕ್ತರು ಪೀಠಕ್ಕೆ ಭೇಟಿ ನೀಡಿ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement