ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಇಂದು ಕಾಂಗ್ರೆಸ್ ಸಮಾವೇಶ

Rashmi Kasaragodu
Updated On : 12 Mar 2014, 1:41 am

ತರೀಕೆರೆ: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾರ್ಚಿ 12 ರಂದು ಮಧ್ಯಾನ 3 ಗಂಟೆಗೆ ಪಟ್ಟಣದ ಎಂ.ಜಿ.ಹಾಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂದು ಬ್ಲಾಕ್  ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಘನಿ ಅನ್ವರ್ ಅವರು ಪತ್ರಿಕಾ ಪ್ರಕಟಣೆಯತಿಳಿಸಿದ್ದಾರೆ.



'ಕಾಂಗ್ರೆಸ್‌ನಿಂದ ಜನಪರ ಯೋಜನೆ ಜಾರಿ'


ಮೂಡಿಗೆರೆ: ಈಗಾಗಲೇ ಕಾಂಗ್ರೆಸ್ ಸರ್ಕಾರ ಆರ್‌ಟಿಇ ಜಾರಿಗೆ ತಂದಿದ್ದು ಮುಂದಿನ ದಿನಗಳಲ್ಲಿ ಲೋಕಪಾಲ ಮಸೂದೆಯನ್ನು ಜಾರಿಗೆ ತರುವುದರೊಂದಿಗೆ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯಲಾಗುತ್ತಿದೆ ಎಂದು ಸಂಸದ ಜಯಪ್ರಕಾಶ್ ಹೆಗ್ಡೆ ಹೇಳಿದರು.
 ಹ್ಯಾಂಡ್‌ಪೋಸ್ಟ್ ರೋಟರಿ ವೃತ್ತದಲ್ಲಿ ಬಹಿರಂಗಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಿಂದೆದಿಗೂ ಆಗದಂತ ಅಭಿವೃದ್ಧಿಕಾರ್ಯಗಳು ತಮ್ಮ ಅವಧಿಯಲ್ಲಿ ಆಗಿದೆ.  2004 ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಜನ ಸಾಮಾನ್ಯರ ಬದುಕಿನಲ್ಲಿ ಮಹತ್ವರ ಬದಲಾವಣೆ ತರುವ ಹಲವಾರು ಜನಪರ ಯೋಜನೆಗಳನ್ನು , ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದರು.  ಕೆಪಿಸಿಸಿ ಸದಸ್ಯ ಜಿ.ಎಸ್.ಹಾಲಪ್ಪಗೌಡ ಮಾತನಾಡಿ. ಕರ್ನಾಟಕ ಸರ್ಕಾರ ಜನಕಲ್ಯಾಣ ಯೋಜನೆಗಳನು ಹಮ್ಮಿಕೊಳ್ಳಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement