ಬಜರಂಗದಳ ಖಂಡನೆ
ಮೂಡಿಗೆರೆ: ಹಲವು ದಶಕಗಳಿಂದ ಆಲ್ದೂರು ಪಟ್ಟಣದ ವೃತ್ತವೊಂದರಲ್ಲಿ ಭಗವಾಧ್ವಜವನ್ನು ತೆರವುಗೊಳಿಸಿದ ಜಿಲ್ಲಾಡಳಿತದ ಕ್ರಮವನ್ನು ತೀವ್ರವಾಗಿ ಖಂಡಿಸುವುದಾಗಿ ಬಜರಂಗದಳದ ತಾಲೂಕು ಸಂಚಾಲಕ ತಿಳಿಸಿದ್ದಾರೆ. ಈ ಕುರಿತು ಮಂಗಳವಾರ ಹೇಳಿಕೆ ನೀಡಿರುವ ಅವರು, ಕೋಮು ಭಾವನೆಯನ್ನು ಕೆರಳಿಸುವ ಯತ್ನವನ್ನು ಜಿಲ್ಲಾಡಳಿತ ಮಾಡುತ್ತದೆಂದು ಯಾರೂ ನಿರೀಕ್ಷಿಸಿರಲಿಲ್ಲ. ರಾಜ್ಯದಲ್ಲಿ ಆಡಳಿತಾರೂಡ ಕಾಂಗ್ರೆಸ್ ಹಿಂದೂಗಳ ವಿರುದ್ಧವಾಗಿದ್ದು, ಧಾರ್ಮಿಕ ಆಚರಣೆ ಮತ್ತು ನಂಬಿಕೆಗಳಿಗೆ ವಿರುದ್ಧವಾಗಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಜಿಲ್ಲಾಡಳಿತ ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದೆ. ರಾತ್ರೋರಾತ್ರಿ ಧ್ವಂಸಗೊಳಿಸಿದ ಧ್ವಜಕಟ್ಟೆಯನ್ನು ಮರು ನಿರ್ಮಾಣ ಮಾಡುವಂತೆ ಅವರು ಒತ್ತಾಯಿಸಿದ್ದಾರೆ.