ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿಶ್ವ ಮಹಿಳಾ ದಿನಾಚರಣೆ

Rashmi Kasaragodu
Updated On : 12 Mar 2014, 1:41 am

ಶೃಂಗೇರಿ: ಪಟ್ಟಣದ ಸ.ಪ್ರ.ದ. ಕಾಲೇಜಿನ ವಾಣಿಜ್ಯ ಮತ್ತು ನಿರ್ವಾಹಣ ಶಾಸ್ತ್ರ ಸಂಘದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚಾರಣೆ ಆಯೋಜಿಸಲಾಗಿತ್ತು.
ಡಾ. ಚಂದ್ರಕಲಾ ಆರ್. ಕೊಂಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳಾ ದಿನಾಚಾರಣೆ ಕೇವಲ ದಿನಾಚಾರಣೆಗೆ ಸೀಮಿತವಾಗಿರದೇ ಇದು ಚಾರಿತ್ರಿಕ ಘಟನೆ ನೆನೆಸುವ ದಿನವಾಗಿದೆ. ಇದು ತನ್ನದೇ ಆದ ಯಶೋಗಾಥೆ ಹೊಂದಿದೆ. ಮಹಿಳೆಯರ ರಕ್ಷಣೆಗೆ ಹಲವು ಕಾನೂನು ಕಾಯ್ದೆಗಳಿದ್ದರೂ, ಇತ್ತೀಚಿನ ದಿನಗಳಲ್ಲಿ  ಮಹಿಳೆಯರ ಮೇಲೆ ನಿರಂತರ ಕಿರುಕುಳದಂತಹ ಪ್ರಕರಣಗಳು ನಡೆಯುತ್ತಲೇ ಇದೆ ಎಂದರು.
ಸಾಮಾಜಿಕ ಪಿಡುಗುಗಳಾದ ಭ್ರೂಣ ಹತ್ಯೆ, ಬಾಲ್ಯವಿವಾಹ, ವರದಕ್ಷಿಣೆ ಪಿಡುಗು ಸಮಾಜದಲ್ಲಿ ಇನ್ನೂ ಜೀವಂತವಾಗಿರುವುದು ವಿಷಾದದ ಸಂಗತಿ. ಮಹಿಳೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯ ಹಾದಿಯಲ್ಲಿದ್ದಾಳೆ. ದೇಶದ ಉನ್ನತ ಹುದ್ದೆ ಅಲಂಕರಿಸಿದ್ದಾಳೆ. ಶೈಕ್ಷಣಿಕ ಕ್ಷೇತ್ರದಲ್ಲಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸುತ್ತಿದ್ದಾರೆ. ಎಂದರು. ಶೇ. 33 ಮಹಿಳಾ ಮೀಸಲಾತಿ ಇದ್ದರೂ, ಅದರ ಸದ್ಭಳಕೆಯಾಗುತ್ತಿಲ್ಲ. ಮಹಿಳೆಯರ ಬಗ್ಗೆ ತಿರಸ್ಕಾರ ಭಾವನೆ ಬೇಡ. ಲಿಂಗತಾರತಮ್ಯ ಮಾಡುವುದನ್ನು ನಿಲ್ಲಿಸಬೇಕು ಎಂದರು. ಪ್ರಾಚಾರ್ಯ ಪ್ರೊ. ಕೆ.ಜಿ. ಸಿದ್ದಲಿಂಗೇಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯಶಾಸ್ತ್ರ ವಿಭಾಗ ಆಶಾಲತಾ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement