ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

18 ವರ್ಷದವರ ಹೆಸರು ಮತದಾರರ ಪಟ್ಟಿಗೆ ಸೇರಿಸಿ

Rashmi Kasaragodu
Updated On : 13 Mar 2014, 11:44 am

ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ ಮಾ.12
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ ಚಲಾವಣೆಗೆ 18 ವರ್ಷ ತುಂಬಿದ ಯುವ ಜನರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡಿಸಿಕೊಳ್ಳಬೇಕೆಂದು ಜಿಪಂ ಉಪ ಕಾರ್ಯದರ್ಶಿ ರಾಜ್‌ಗೋಪಾಲ್ ಕರೆ ನೀಡಿದ್ದಾರೆ.
ಚುನಾವಣಾ ಆಯೋಗ, ಜಿಲ್ಲಾಡಳಿತ ವತಿಯಿಂದ ನಗರದ ಎಂಇಎಸ್ ಕಾಲೇಜು ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಮತದಾನದಲ್ಲಿ ಪಾಲ್ಗೊಳ್ಳುವಿಕೆ ಕಾರ್ಯಕ್ರಮದಡಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾಗವಹಿಸಿ:  2014 ಜ.1ರಂದು 18 ವರ್ಷ ದಾಟಿದವರಿಗೆ ಮತದಾರರ ಪಟ್ಟಿಯ ಸೇರ್ಪಡೆಗೆ ಅವಕಾಶವಿದೆ. ಮಾ.16 ರೊಳಗೆ ಮತದಾರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಳ್ಳುವುದರೊಂದಿಗೆ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲೂ ಬೂತ್‌ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಬದಲಾವಣೆ, ಹೆಸರು ತೆಗೆದು ಹಾಕಲು ಇವರನ್ನು ಸಂಪರ್ಕಿಸಬಹುದಾಗಿದೆ. ಇದಕ್ಕೆ ಸಂಬಂಧಿಸಿದ ಅರ್ಜಿಗಳೂ ಇವರಲ್ಲಿ ಲಭ್ಯವಿರುತ್ತದೆ. 18 ವರ್ಷ ದಾಟಿದವರು ತಮ್ಮ ವಯಸ್ಸು ಮತ್ತು ವಿಳಾಸಕ್ಕೆ ಸಂಬಂಧಿಸಿದ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಜಾಪ್ರಭುತ್ವ ಎಂದರೆ ಅಲ್ಲಿ ಪ್ರಜೆಗಳೇ ಪ್ರಭುಗಳು. ಅವರು ಜನರಿಗೆ ತಮ್ಮ ಪ್ರತಿನಿಧಿಯನ್ನು ಚುನಾಯಿಸುವ ಜವಬ್ದಾರಿ ಇದ್ದು, ಮತದಾರ ಮತ್ತು ಆತನ ಮತ ಮಹತ್ವ ಪೂರ್ಣದಾಗಿರುತ್ತದೆ ಎಂದರು.
ಉತ್ತಮ ಕಾರ್ಯ:  ಜಿಲ್ಲಾ ಸ್ವೀಪ್ ಕಮಿಟಿ ವತಿಯಿಂದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮತದಾನ ಮಾಡುವ ವಿಷಯದ ಬಗ್ಗೆ ಭಾಷಣ ಸ್ಪರ್ಧೆ, ರಸಪ್ರಶ್ನೆ, ಚರ್ಚಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳುವುದರ ಮೂಲಕ ಯುವಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಒಂದು ಉತ್ತಮ ಕಾರ್ಯ ಎಂದರು.
ಪ್ರಭಾವಕ್ಕೆ ಒಳಗಾಗದಿರಿ:  ಎಂಇಎಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ವಿಷ್ಣುವರ್ಧನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನರಿಂದ ಜನರಿಗಾಗಿ ಜನರಿಗೋಸ್ಕರ ನಡೆಯುವ ಪ್ರತಿನಿಧಿ ಆಯ್ಕೆ ರೂಡಿಸಿಕೊಂಡಿರುವ ನಮ್ಮ ದೇಶದಲ್ಲಿ ಮತದಾರರು ಪ್ರತಿನಿಧಿಗಳಿಗೆ ಅಧಿಕಾರ ವಹಿಸಿ ಸೇವೆ ಬಯಸುವುದು ಸಾಮಾನ್ಯ. ವಿದ್ಯಾರ್ಥಿಗಳು ವಿವೇಕ ವಿವೇಚನೆ ಬಳಸಿ ಯಾವುದೇ ಆಮಿಷ ಒತ್ತಡಗಳ ಪ್ರಭಾವಕ್ಕೆ ಒಳಗಾಗದೇ ಮತಚಲಾವಣೆ ಮಾಡಬೇಕೆಂದು ಹೇಳಿದರು.
ಮತದಾನದ ಮಹತ್ವ ಕುರಿತು ನೀಲಕಂಠಪ್ಪ, ಓಂಕಾರಪ್ಪ ಉಪನ್ಯಾಸ ನೀಡಿದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ರಾಮನಾಯ್ಕ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಮಂಜುನಾಥ, ತಾಲೂಕು ಪಂಚಾಯತ್ ಕಾರ್ಯನಿರ್ವಹಕಾಧಿಕಾರಿ ಧನರಾಜ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement