ಚುನಾವಣೆ: ಕಂಟ್ರೋಲ್ ರೂಂ
ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆಯು ಏ.17ರಂದು ನಡೆಯಲಿದ್ದು, ಚುನಾವಣೆಯು ಶಾಂತಿ ಸುವ್ಯವಸ್ಥೆ ಹಾಗೂ ಮುಕ್ತವಾಗಿ ನಡೆಸುವ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಚುನಾವಣಾ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಎಸ್. ಶೇಖರಪ್ಪ ತಿಳಿಸಿದರು.
ಚಿಕ್ಕಮಗಳೂರು ಡಿಸಿ ಕಚೇರಿ ದೂ.ಸಂ. 08262-239833, ಚಿಕ್ಕಮಗಳೂರು ತಾಲೂಕು- 08262- 231382, ಕಡೂರು- 08267-221111, ತರೀಕೆರೆ- 08261-222250, ಮೂಡಿಗೆರೆ- 08263- 220204, ಕೊಪ್ಪ- 08265-221047, ಎನ್.ಆರ್.ಪುರ- 08266-220845 ಹಾಗೂ 08265- 250135 ಆಗಿದೆ. ಸಾರ್ವಜನಿಕರು ಚುನಾವಣಾ ಸಂಬಂಧ ದೂರು ಅಥವಾ ಸಲಹೆಗಳನ್ನು ದೂರವಾಣಿ ಮೂಲಕ ಅಥವಾ ಖುದ್ದಾಗಿ ಭೇಟಿ ಮಾಡಿ ಅಹವಾಲು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಇಂದು ಪೂರ್ವಸಿದ್ಧ್ದತಾ ಸಭೆ
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸಂಬಂಧ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳ ಸಭೆಯು ಮಾ. 13 ರಂದು ಬೆಳಿಗ್ಗೆ 10.30 ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ.