ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಡಾ.ಪರಮಶಿವಯ್ಯಗೆ ಮರಣೋತ್ತರ ಪ್ರಶಸ್ತಿ: ರಂಭಾಪುರಿಶ್ರೀ

Rashmi Kasaragodu
Updated On : 13 Mar 2014, 11:44 am

ಕ.ಪ್ರ.ವಾರ್ತೆ ಟಿ ಬಾಳೆಹೊನ್ನೂರು ಟಿ ಮಾ.12
ಖ್ಯಾತ ನೀರಾವರಿ ತಜ್ಞ ಡಾ. ಜಿ.ಎಸ್. ಪರಮಶಿವಯ್ಯ ಅವರನ್ನು ಮಾ.14ರಂದು ಪ್ರತಿಷ್ಠಿತ ಶ್ರೀಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಮಾಡಲು ಆಯ್ಕೆ ಮಾಡಲಾಗಿತ್ತು. ಆದರೆ, ಅವರ ಅಗಲಿಕೆಯಿಂದಾಗ ಈ ಪ್ರಶಸ್ತಿ ಅವರಿಗೆ ಮರಣೋತ್ತರವಾಗಿ ಪ್ರದಾನ ಮಾಡಲಾಗುವುದು ಎಂದು ಬಾಳೆಹೊನ್ನೂರು ಶ್ರೀರಂಭಾಪುರೀ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಶಸ್ತಿಯನ್ನು ಅವರ ಪುತ್ರರು ಸ್ವೀಕರಿಸಲಿದ್ದಾರೆ. ಡಾ.ಪರಮಶಿವಯ್ಯ ಅವರ ಅಗಲಿಕೆ ಅತೀವ ನೋವು ತಂದಿದೆ. ಪರಮಾತ್ಮ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದಿದ್ದಾರೆ.
ಡಾ. ಜಿ.ಎಸ್. ಪರಮಶಿವಯ್ಯ ಅವರು ಕಾವೇರಿ ನದಿ ಪ್ರಾಧಿಕಾರದ ಸದಸ್ಯರಾಗಿ, ಕೃಷ್ಣಾ ಜಲಭಾಗ್ಯ ನಿಗಮದ ನಿರ್ದೇಶಕರಾಗಿ ಸೇವೆ ಸಲ್ಲಿಸಿ ರಾಜ್ಯದ ಹಲವಾರು ಕುಡಿಯುವ ನೀರಿನ ಯೋಜನೆಗಳು ಸೇರಿದಂತೆ ಹಲವು ನೀರಾವರಿ ಯೋಜನೆಗಳಿಗೆ ಜೀವ ತುಂಬಿದ್ದಾರೆ. ನೇತ್ರಾವತಿ ನದಿ ತಿರುವು ಯೋಜನೆಯ ಹರಿಕಾರ ಎಂದೇ ಅವರು ಗುರುತಿಸಲ್ಪಡುತ್ತಿದ್ದರು ಎಂದು ಶ್ರೀಗಳು ಅಭಿಪ್ರಾಯಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement