ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನೀತಿಸಂಹಿತೆ ಉಲ್ಲಂಘನೆ: ದೂರು

Rashmi Kasaragodu
Updated On : 13 Mar 2014, 11:47 am

ಚಿಕ್ಕಮಗಳೂರು: ತಾಲೂಕಿನ ಆಲ್ದೂರಿನಲ್ಲಿದ್ದ ಧ್ವಜಕಟ್ಟೆಯನ್ನು ತೆರವುಗೊಳಿಸುವ ಮೂಲಕ ಜಿಲ್ಲಾಡಳಿತ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಿದೆ ಎಂದು ನಗರ ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲೆಯಲ್ಲಿ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಬೇಕು ಹಾಗೂ ಧ್ವಜಕಟ್ಟೆ ತೆರವುಗೊಳಿಸಲು ಸಹಕರಿಸಿದ ಪೊಲೀಸ್ ಇಲಾಖೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ನಗರಾಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಈ ಸಂದರ್ಭದಲ್ಲಿ ಒಂದು ಕೋಮಿನ ಜನರ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಪೊಲೀಸ್ ಅಧಿಕಾರಿಗಳು ಶಾಮಿಲ್ ಆಗಿ ಜಿಲ್ಲಾಡಳಿತವೂ ಆಲ್ದೂರಿನ ಭಗವಾಧ್ವಜಕಟ್ಟೆಯನ್ನು ಹೊಡೆದುಹಾಕಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement