17ರಿಂದ ಶಾಸನ ಅಧ್ಯಯನ ತರಬೇತಿ
ಚಿಕ್ಕಮಗಳೂರು: ಕನ್ನಡ ವಿಶ್ವವಿದ್ಯಾನಿಲಯದ ಶಾಸನಶಾಸ್ತ್ರ ವಿಭಾಗದ ಆಶ್ರಯದಲ್ಲಿ ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಮಾ. 17ರಿಂದ ಮೂರು ದಿನಗಳ ಕಾಲ ಶಾಸನ ಅಧ್ಯಯನ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಮಾ. 17ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಹಿರಿಯ ಸಂಶೋಧಕ ಡಾ. ಷ. ಶೆಟ್ಟರ್ ಅವರು ಶಿಬಿರ ಉದ್ಘಾಟಿಸಲಿದ್ದಾರೆ. ಕನ್ನಡ ವಿಶ್ವವಿದ್ಯಾನಿಲಯ ಕುಲಪತಿ ಡಾ. ಹಿ.ಚಿ. ಬೋರಲಿಂಗಯ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಎಂಇಎಸ್ ಗೌರವ ಕಾರ್ಯದರ್ಶಿ ಡಾ. ಡಿ.ಎಲ್. ವಿಜಯಕುಮಾರ್, ಉಪಾಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ, ಖಜಾಂಚಿ ಡಿ.ಎಚ್. ನಟರಾಜ್, ರಾಜ್ಯಪಾಲರ ಆಪ್ತ ಶಾಖೆಯ ವ್ಯವಸ್ಥಾಪಕ ಎ.ಎಂ. ಬಡಿಗೇರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಸಂವಾದದಲ್ಲಿ ಹಳಗನ್ನಡ ಲಿಪಿ, ಲಿಪಿಕಾರ ಮತ್ತು ಲಿಪಿ ವ್ಯವಸಾಯ ಕುರಿತು ಡಾ. ಷ. ಶೆಟ್ಟರ್ ಅವರು ಮಾತನಾಡಲಿದ್ದಾರೆ. ಮಾ. 19 ರಂದು ಮಧ್ಯಾಹ್ನ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಬೆಂಗಳೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ. ಬಸವರಾಜ ಕಲ್ಗುಡಿ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ.
ಎಂಇಎಸ್ನ ಉಪಾಧ್ಯಕ್ಷ ಕೇಶವಮೂರ್ತಿ ಅಧ್ಯಕ್ಷತೆ ವಹಿಸಲಿದ್ದು, ಸಹ ಕಾರ್ಯದರ್ಶಿ ಶಂಕರನಾರಾಯಣ ಭಟ್, ಉಪಾಧ್ಯಕ್ಷೆ ರಾಧಾ ಸುಂದರೇಶ್ ಹಾಗೂ ಕಚೇರಿ ವ್ಯವಸ್ಥಾಪಕಿ ಎಸ್. ಶಾಂತಕುಮಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.