ಇಂದು ಕಾರ್ಯಕರ್ತರ ಸಭೆ
ಕೇಂದ್ರದ ಮಾಜಿ ಸಚಿವ ಧನಂಜಯಕುಮಾರ್ ಅವರು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ. ಈ ಸಂಬಂಧ ಅವರು ಮಾ. 15 ರಂದು ಚಿಕ್ಕಮಗಳೂರಿಗೆ ಆಗಮಿಸಲಿದ್ದು, ಪಕ್ಷದ ಕಾರ್ಯಲಯದಲ್ಲಿ ನಡೆಯಲಿರುವ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಧನಂಜಯಕುಮಾರ್ ಓರ್ವ ಕ್ರಿಯಾಶೀಲ ನಾಯಕರು. ಅವರು ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಲು ಮುಂದೆ ಬಂದಿದ್ದು, ಈ ಸಂಬಂಧ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಅವರಿಗೆ ಪಕ್ಷ ಸ್ವಾಗತಿಸುತ್ತದೆ ಎಂದು ಹೇಳಿದರು.