ಕಾಂಗ್ರೆಸ್ಗೆ ಬೆಂಬಲ ಕೋರಿದ ನಹೀಂ
ನರಸಿಂಹರಾಜಪುರ: ಪಟ್ಟಣ ಪಂಚಾಯ್ತಿಯ 5ನೇ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲವು ಸಾಧಿಸಿರುವ ಸಮೀರ ನಹೀಂ ಅವರು ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ಘೋಷಿಸಿದ್ದಾರೆ ಎಂದು ಪಕ್ಷದ ನಗರ ಘಟಕದ ಅಧ್ಯಕ್ಷ ಕೆ.ವಿ. ವಸಂತಕುಮಾರ್ ತಿಳಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮೀರ ನಹೀಂ ಅವರು ಮೂಲ ಕಾಂಗ್ರೆಸ್ಗೆ ಸೇರಿದ್ದರೂ 5ನೇ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದರು. ಮಾ.15ರಂದು ನಡೆಯುವ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಹಾಗೂ ಮುಂದಿನ 30 ತಿಂಗಳು ಕಾಂಗ್ರೆಸ್ ಬೆಂಬಲಿಸಲು ಒಪ್ಪಿದ್ದಾರೆ ಎಂದರು.
ಸಮೀರ ನಹೀಂ ಮಾತನಾಡಿ, ನಾನು ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದರೂ ಈಗ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಕಾಂಗ್ರೆಸ್ಗೆ ಬೆಂಬಲ ಸೂಚಿಸಿದ್ದೇನೆ. ಇದರಿಂದ ನಾನು ಜಯಗಳಿಸಿರುವ 5 ವಾರ್ಡಿನ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಬಹುದಾಗಿದೆ. ಮತದಾರರೊಂದಿಗೆ ಸಮಾಲೋಚನೆ ಮಾಡಿ ನಂತರ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಟ್ಟಣ ಪಂಚಾಯ್ತಿ ಸದಸ್ಯರಾದ ಲೇಖಾ ವಸಂತ್, ಅಂಜುಮ್, ಮುಖಂಡ ಎಂ.ಆರ್. ರವಿಶಂಕರ್ ಇದ್ದರು.