ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಪಪಂ ಅಧ್ಯಕ್ಷ ಸ್ಥಾನ: ಲೇಖಾ ವಸಂತ್ ಆಯ್ಕೆ?

Rashmi Kasaragodu
Updated On : 15 Mar 2014, 11:23 am

ನರಸಿಂಹರಾಜಪುರ: ಪಟ್ಟಣ ಪಂಚಾಯ್ತಿಗೆ ಮಾ.15ರಂದು ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕಾಗಿ ಚುನಾವಣೆ ನಡೆಯಲಿದ್ದು, ಜೆಡಿಎಸ್, ಪಕ್ಷೇತರ ಸದಸ್ಯರ ಬೆಂಬಲದೊಂದಿಗೆ ಕಾಂಗ್ರೆಸ್‌ನ ಲೇಖಾ ವಸಂತ್ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ನಡೆದ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಬರದೆ ಅತಂತ್ರ ಸ್ಥಿತಿ ನಿರ್ಮಾಣವಾಗಿತ್ತು. ಕಾಂಗ್ರೆಸ್ 4, ಬಿಜೆಪಿ 4, ಜೆಡಿಎಸ್ 2 ಹಾಗೂ ಒಬ್ಬರು ಪಕ್ಷೇತರ ಅಭ್ಯರ್ಥಿ ಗೆಲವು ಸಾಧಿಸಿದ್ದರು. ಯಾವುದೇ ಪಕ್ಷವು ಅಧಿಕಾರ ಹಿಡಿಯಬೇಕಾದರೂ ಬೇರೆ ಪಕ್ಷವನ್ನು ಅವಲಂಬನೆ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ಇತ್ತು. ಮೀಸಲಾತಿಯ ವಿಷಯ ನ್ಯಾಯಾಲಯಕ್ಕೆ ಹೋಗಿದ್ದರಿಂದ ಕಳೆದ ಒಂದು ವರ್ಷದಿಂದಲೂ ತಟಸ್ಥವಾಗಿದ್ದ ರಾಜಕೀಯ ಚಟುವಟಿಕೆ ಚುನಾವಣೆ ಘೋಷಣೆಯಾದ ಒಂದು ವಾರದಿಂದ ಮತ್ತೆ ಗರಿಗೆದರಿದೆ.
ಕಾಂಗ್ರೆಸ್, ಜೆಡಿಎಸ್ ಒಪ್ಪಂದ: ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಯ ಮೀಸಲಾತಿ ಇದ್ದು, ಕಾಂಗ್ರೆಸ್ ಪಕ್ಷದಲ್ಲಿ ಎರಡನೇ ಅವಧಿಗೆ ಆಯ್ಕೆಯಾದ ಲೇಖಾ ವಸಂತ್  ಸ್ಪರ್ಧಾ ಕಣದಲ್ಲಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಸಮೀರ ನಹೀಂ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಪ್ರಚಾರದಲ್ಲಿದ್ದರೂ ಗುರುವಾರದ ಅಂತಿಮ ಮಾತುಕತೆಯ ನಂತರ ಲೇಖಾ ವಸಂತ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಉಪಾಧ್ಯಕ್ಷ ಸ್ಥಾನವು ಬಿ.ಸಿ.ಎಂ. (ಎ) ಮೀಸಲಾತಿ ಬಂದಿದ್ದು, ಜೆಡಿಸ್‌ಗೆ ಉಪಾಧ್ಯಕ್ಷ ಸ್ಥಾನ ಬಿಟ್ಟುಕೊಡಲು ಕಾಂಗ್ರೆಸ್ ಒಪ್ಪಿಕೊಂಡಿದೆ. ಜೆಡಿಎಸ್‌ನಿಂದ ಎರಡನೇ ಬಾರಿ ಆಯ್ಕೆಯಾದ ಅಬ್ದುಲ್ ಸುಬಾನ್ ಉಪಾಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement