ಮತದಾನ ಜಾಗೃತಿ ಆಂದೋಲನ
ಚಿಕ್ಕಮಗಳೂರು: ಪ್ರತಿಯೊಬ್ಬ ನಾಗರಿಕರು ಕಡ್ಡಾಯವಾಗಿ ಮತದಾನ ಮಾಡಬೇಕು. ಇದರಿಂದ ಸದೃಢ ಸರ್ಕಾರ ರಚನೆ ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿ ಕೆ.ಜಿ. ನೀಲಕಂಠಪ್ಪ ಹೇಳಿದ್ದಾರೆ. ನಗರದ ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕರ ತರಬೇತಿ ಕೇಂದ್ರದಲ್ಲಿ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಮತದಾನದ ಜಾಗೃತಿ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 18 ವರ್ಷ ತುಂಬಿದ ಎಲ್ಲಾ ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಮಾರ್ಚ್ 16ರ ಒಳಗೆ ಸಮೀಪದ ಬೂತ್ ಮಟ್ಟದ ಅಧಿಕಾರಿಗಳಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು. ಎಚ್.ಎಂ. ಓಂಕಾರಪ್ಪ ಉಪನ್ಯಾಸ ನೀಡಿದರು. ಆರೋಗ್ಯ ಸಹಾಯಕರ ತರಬೇತಿ ಕೇಂದ್ರದ ಪ್ರಾಂಶುಪಾಲೆ ಕಲ್ಯಾಣಮ್ಮ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪನ್ಯಾಸಕಿ ರೇಣುಕಾ ಸ್ವಾಗತಿಸಿದರು, ರಾಜಣ್ಣ ವಂದಿಸಿದರು.