ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನ.ರಾ. ಪುರ ಪಪಂಗೆ ಆಯ್ಕೆ

Lingaraj Badiger
Updated On : 16 Mar 2014, 12:10 pm

ನರಸಿಂಹರಾಜಪುರ: ನಿರೀಕ್ಷೆಯಂತೆ ಪಟ್ಟಣ ಪಂಚಾಯ್ತಿಯ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಲೇಖಾ ವಸಂತ್ ಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್‌ನ ಅಬ್ದುಲ್ ಸುಬಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶನಿವಾರ ಪಟ್ಟಣ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆ ಸ್ಥಾನಕ್ಕಾಗಿ ಕಾಂಗ್ರೆಸ್‌ನ ಲೇಖಾ ವಸಂತ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕಾಗಿ ಹಿಂದುಳಿದ ವರ್ಗ (ಎ) ಮೀಸಲಾತಿಯ ಸ್ಥಾನಕ್ಕಾಗಿ ಜೆಡಿಎಸ್‌ನ ಅಬ್ದುಲ್ ಸುಬಾನ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ತಹಸೀಲ್ದಾರ್ ಕೃಷ್ಣಮೂರ್ತಿ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಅಭಿನಂದನೆ: ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ನೂತನ ಅಧ್ಯಕ್ಷೆ ಲೇಖಾ ವಸಂತ್ ಮಾತನಾಡಿ, ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಪಟ್ಟಣ ಪಂಚಾಯ್ತಿಯಲ್ಲಿ ಉತ್ತಮ ಆಡಳಿತ ನೀಡಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಉಪಾಧ್ಯಕ್ಷರಾಗಿ ಆಯ್ಕೆಯಾದ ಅಬ್ದುಲ್ ಸುಬಾನ್ ಮಾತನಾಡಿ, ಸಿಕ್ಕಿದ ಅವಕಾಶದಲ್ಲಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಜಿಪಂ ಮಾಜಿ ಅಧ್ಯಕ್ಷ ರಾಜೇಗೌಡ ಅಭಿನಂದಿಸಿದರು. ವಿಧಾನ ಪರಿಷತ್ ಸದಸ್ಯ ಎಂ. ಶ್ರೀನಿವಾಸ್, ಎಚ್.ಟಿ. ರಾಜೇಂದ್ರ, ಆದಿಲ್, ಡಾ. ಕೆ.ಪಿ. ಅಂಶುಮಂತ್, ಎಸ್.ಎಸ್. ಶಾಂತಕುಮಾರ್, ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ನೂತನ ಅಧ್ಯಕ್ಷೆ, ಉಪಾಧ್ಯಕ್ಷರನ್ನು ಅಭಿನಂದಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement