ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಮಲೆನಾಡ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ'

Lingaraj Badiger
Updated On : 16 Mar 2014, 12:09 pm

ನರಸಿಂಹರಾಜಪುರ: ಮಲೆನಾಡಿನ ಸಮಸ್ಯೆಯಾದ ಒತ್ತುವರಿ ಸಮಸ್ಯೆ, ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆಗಳು ಬಿಜೆಪಿ ಸರ್ಕಾರದ ತಪ್ಪು ನೀತಿಗಳಿಂದಾಗಿ ಗೊಂದಲ ಉಂಟಾಗಿದ್ದು, ಕಾಂಗ್ರೆಸ್ ಸರ್ಕಾರ ಈ ಎಲ್ಲಾ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ಜಿಪಂ ಮಾಜಿ ಸದಸ್ಯ ಟಿ.ಡಿ. ರಾಜೇಗೌಡ ತಿಳಿಸಿದರು.
ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2002 ರಲ್ಲಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಕಸ್ತೂರಿ ರಂಗನ್ ವರದಿಗೆ ಚಾಲನೆ ನೀಡಲಾಯಿತು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹುಲಿ ಯೋಜನೆ ಜಾರಿಗೆ ಒಪ್ಪಿಗೆ ನೀಡಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಒತ್ತುವರಿ ಜಮೀನು ಖುಲ್ಲಾ ಮಾಡಿಸುತ್ತೇವೆ ಎಂದು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ್ದರು. ಈಗ ಕಾಂಗ್ರೆಸ್‌ನವರ ಮೇಲೆ ಸುಳ್ಳು ಆರೋಪ ಹೊರಿಸುತ್ತಿದ್ದಾರೆ ಎಂದರು.
ಪ್ರಾಮಾಣಿಕ ಸಮಸ್ಯೆ: ಕಾಂಗ್ರೆಸ್ ಸರ್ಕಾರ ಗ್ರಾಮ ಅರಣ್ಯ ಹಕ್ಕು ಸಮಿತಿ ರಚನೆ ಮಾಡಿದ್ದು, ಬಡ ಒತ್ತುವರಿದಾರರಿಗೆ ಹಕ್ಕುಪತ್ರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಒತ್ತುವರಿ ಸಮಸ್ಯೆ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದ್ದು, ಬಡ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲು ಖಾಸಗಿ ಶಾಲೆಗಳಲ್ಲಿ ಶೇ. 25 ಸೀಟು ಮೀಸಲಿಡಲಾಗಿದೆ ಎಂದವರು ಹೇಳಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement