ನೂತನ ಪದಾಧಿಕಾರಿಗಳ ಆಯ್ಕೆ
ಶೃಂಗೇರಿ: ತಾಲೂಕಿನ ಮೆಣಸೆ ಪಂಚಾಯಿತಿ ರೇಣುಕಾಂಬಾ ನಗರದ ನೂತನ ರೇಣುಕಾಂಬಾ ಯುವಕ ಸಂಘದ ಅಧ್ಯಕ್ಷರಾಗಿ ಯತೀಶ್ ಎಂ.ಜಿ. ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶರತ್ಕುಮಾರ್,ಪ್ರಧಾನ ಕಾರ್ಯದರ್ಶಿಯಾಗಿ ಸಂತೋಶ್ಕುಮಾರ್, ಖಜಾಂಚಿಯಾಗಿ ಕಿರಣಕುಮಾರ್ ಆಯ್ಕೆಯಾಗಿದ್ದಾರೆ. ಭಾನುವಾರ ಮಸಿಗೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರತಿಯೆ ನಡೆಯಿತು.