ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಬಿಜೆಪಿ ಜಿಲ್ಲಾ ಮಟ್ಟದ ಪ್ರಮುಖರ ಸಭೆ

Rashmi Kasaragodu
Updated On : 20 Mar 2014, 12:16 pm

ಚಿಕ್ಕಮಗಳೂರು:  ಬಿಜೆಪಿಯ ಜಿಲ್ಲಾ ಮಟ್ಟದ ವಿಶೇಷ ಸಂಪರ್ಕ ಅಭಿಯಾನದ ಪ್ರಮುಖರ ಸಭೆ ಪಕ್ಷದ ಕಚೇರಿಯಲ್ಲಿ ನಡೆಯಿತು.
ಪ್ರಾಂತ ಸಂಯೋಜಕ ಕೆ.ಎ. ಮಂಜುನಾಥ್ ಅವರು ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣಾ ಮಹತ್ವವನ್ನು ಸಮಾಜದ ಎಲ್ಲಾ ವರ್ಗಗಳಿಗೂ ತಿಳಿಸಿ ಈ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾರ್ಗದರ್ಶನ ಮಾಡಬೇಕು ಎಂದರು.
ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಹೆಚ್ಚಾದರೆ ಪ್ರಜಾಪ್ರಭುತ್ವ ಯಶಸ್ವಿಯಾದಂತೆ. ಈ ನಿಟ್ಟಿನಲ್ಲಿ ಸಮಾಜದಲ್ಲಿನ ಎಲ್ಲಾ ವರ್ಗದ ಜನರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಅಗತ್ಯವಾದ ವಿಶೇಷ ಸಂಪರ್ಕ ಹಾಗೂ ಅಭಿಯಾನ ಅತ್ಯವಶ್ಯಕ. ಸಾಮಾನ್ಯ ಅಭಿಯಾನದ ಜತೆಗೆ ಸಮಾಜದಲ್ಲಿನ ವಿವಿಧ ವರ್ಗಗಳಿಗೆ ಪ್ರತ್ಯೇಕ ಅಭಿಯಾನ ಅತ್ಯಂತ ಪರಿಣಾಮಕಾರಿ ಮತ್ತು ನಮ್ಮ ಶಕ್ತಿವರ್ಧನೆಗೆ ಪೂರಕ ಎಂದು ಹೇಳಿದರು.
ಶಾಸಕ ಸಿ.ಟಿ. ರವಿ ಮಾತನಾಡಿ, ಸಾಮಾಜಿಕ ಸಂಘ- ಸಂಸ್ಥೆಗಳು ಸಾಮಾನ್ಯ ವ್ಯಕ್ತಿಗಳು ಈ ಚುನಾವಣೆ ಬಗ್ಗೆ ಕುತೂಹಲಗೊಂಡಿದ್ದಾರೆ. ಹೊಸ ಉತ್ಸಾಹದ ವಾತಾವರಣ ದೇಶದಲ್ಲಿ ಕಂಡು ಬರುತ್ತಿದೆ. ಬಿಜೆಪಿ ದುರ್ಬಲವಾಗಿರುವಂತಹ ಜಿಲ್ಲೆಗಳಲ್ಲಿಯೂ ಬಿಜೆಪಿ ಅಲೆ ಪ್ರಖರವಾಗಿ ಬೀಸುತ್ತಿದೆ. ಯುವಕರು ರಾಜಕೀಯ ಚಟುವಟಿಕೆಗಳಲ್ಲಿ ಮುಂದೆ ಬರುತ್ತಿದ್ದಾರೆ ಎಂದರು.
ಪ್ರಮುಖ್ ಎಚ್.ಎಸ್. ಪುಟ್ಟೇಗೌಡ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಷ್ಟ್ರೀಯ ಪರಿಷತ್ ಸದಸ್ಯರಾದ ಎಂ.ಎಸ್. ಬೋಜೇಗೌಡ, ವಿಶೇಷ ಸಂಪರ್ಕ ಪ್ರಮುಖರಾದ ಮೋಹಿನಿ ಸಿದ್ದೇಗೌಡ, ಮಂಜುನಾಥ್ ಕಾಮತ್, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷರಾದ ಕೆ.ಪಿ. ವೆಂಕಟೇಶ್, ಜಿಲ್ಲಾ ಉಪಾಧ್ಯಕ್ಷರಾದ ರಂಗನಾಥ್ ಕೋಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಆರ್. ಪ್ರೇಂಕುಮಾರ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement