ಶಸ್ತ್ರಾಸ್ತ್ರ ವಾಪಸ್ ಪಡೆಯದಿರಲು ಸಿಪಿಐ ಮನವಿ
ಮೂಡಿಗೆರೆ: ಚುನಾವಣೆ ಹಿನ್ನೆಲೆಯಲ್ಲಿ ರೈತರು ತಮ್ಮ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ನೀಡುವಂತೆ ಚುನಾವಣೆ ಆಯೋಗ ತಿಳಿಸಿದ್ದು, ಮಲೆನಾಡು ಭಾಗದಲ್ಲಿ ನಕ್ಸಲ್ ಸೇರಿದಂತೆ ಕಾಡುಪ್ರಾಣಿಗಳ ಹಾವಳಿ ಅತಿಯಾಗಿರುವುದರಂದ ಬೆಳೆ ಮತ್ತು ತಮ್ಮ ರಕ್ಷಣೆಗೆ ಶಸ್ತ್ರಾಸ್ತ್ರ ಅತ್ಯಗತ್ಯವಾಗಿದೆ. ಆದ್ದರಿಂದ ಅವುಗಳನ್ನು ವಶಪಡಿಸಿಕೊಳ್ಳದಂತೆ ಸಿಪಿಐ ಮುಖಂಡ ಬಿ.ಕೆ. ಲಕ್ಷ್ಮಣ್ ಕುಮಾರ್ ಜಿಲ್ಲಾಧಿಕಾರಿಗಳಿಗೆ ಮತ್ತು ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಕೊಡಗು ಜಿಲ್ಲೆಯ ಕೆ.ಆರ್.ಸುರೇಶ್ ಎಂಬುವವರು ರೈತರ ಸಮಸ್ಯೆ ಬಗ್ಗೆ ಹೈಕೋರ್ಟ್ಗೆ ಈ ಬಗ್ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.