ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಜಿಲ್ಲೆಯಲ್ಲಿ ಲೋಡ್‌ಶೆಡ್ಡಿಂಗ್ ಅನಿವಾರ್ಯ

Srinivasa Murthy VN
Updated On : 23 Mar 2014, 10:54 am

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಿದೆ ಎಂದು ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದ ವಿದ್ಯುತ್ ಜಾಲಕ್ಕೆ ವಿದ್ಯುತ್ ಸರಬರಾಜು ಮಾಡುತ್ತಿರುವ ಯುಪಿಜಿಎಲ್ (ಉಡುಪಿ ಪವರ್ ಕಾರ್ಪೋರೇಷನ್ ಲಿಮಿಟೆಡ್) ಉತ್ಪಾದನೆಯು ತಾಂತ್ರಿಕ ದೋಷದಿಂದ 1,000 ಮೆ.ವ್ಯಾ.ನಿಂದ 500 ಮೆ.ವ್ಯಾ.ಗೆ ಕುಂಠಿತಗೊಂಡಿದೆ ಹಾಗೂ ಇತರೆ ಮೂಲಗಳಾದ ಪವನ್ ವಿದ್ಯುತ್ ಹಾಗೂ ಇತರೆ ವಿದ್ಯುತ್ ಸರಬರಾಜು ಮೂಲಗಳು ಭಾಗಶಃ ಸ್ಥಗಿತಗೊಂಡಿರುವುದರಿಂದ ಈಗ ಲಭ್ಯವಿರುವ ವಿದ್ಯುತನ್ನೇ ಅನಿವಾರ್ಯವಾಗಿ ಹಂಚಿಕೆ ಮಾಡಬೇಕಾಗಿರುವುದರಿಂದ ಸಾರ್ವಜನಿಕರು ಇದಕ್ಕೆ ಸಹಕರಿಸಬೇಕೆಂದು ಮನವಿ ಮಾಡಲಾಗಿದೆ.

ಏ. 2ರಂದು ಜಿಪಂ ಉಪಾಧ್ಯಕ್ಷರ ಆಯ್ಕೆ
ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ಏ. 2ರಂದು ಚುನಾವಣೆ ನಡೆಯಲಿದೆ.ಅಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸುಜಾತ ಅವರು ಪಕ್ಷದಲ್ಲಿನ ಆಂತರಿಕ ಒಪ್ಪಂದದ ಮೇರೆಗೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಏ. 2 ರಂದು ಜಿಲ್ಲಾ ಪಂಚಾಯಿತಿಯ ಎರಡನೇ ಅವಧಿಯ ಉಳಿದ ಅವಧಿಗೆ ಚುನಾವಣೆ ನಡೆಯಲಿದೆ.

ದಶಮಿಗೆ 3 ಚಿನ್ನ
ತರೀಕೆರೆ: ಸಮೀಪದ ಕೆಂಚಿಕೊಪ್ಪದ ವಿದ್ಯಾರ್ಥಿನಿ ಯು. ದಶಮಿ ಎಂ.ಸಿ.ಎ. ಸ್ನಾತಕೋತ್ತರ ಪದವಿಯಲ್ಲಿ ಅತ್ಯಧಿಕ ಅಂಕ ಗಳಿಸಿದ್ದಕ್ಕಾಗಿ ಕುವೆಂಪು ವಿಶ್ವವಿದ್ಯಾನಿಲಯ ವತಿಯಿಂದ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಚಿನ್ನದ ಪದಕ ಮತ್ತು ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಜ್ಯಪಾಲ ಹಂಸರಾಜ್ ಭಾರದ್ವಾಜ್, ಕು.ವಿ.ವಿ.ದ ಉಪಕುಲಪತಿ ಪ್ರೊ. ಎಸ್.ಎ. ಬಾರಿ ಅವರು ಯು.ದಶಮಿ ಅವರಿಗೆ ವಿ.ವಿ.ದ, ಉಜ್ವಲ ಸಮಿತಿ ಹಾಗೂ ಶ್ಯಾಮನೂರು ಶಿವಶಂಕರಪ್ಪ ದಾವಣಗೆರೆ ಅವರು ನೀಡಿದ ಒಟ್ಟು ಮೂರು ಚಿನ್ನದ ಪದಕಗಳನ್ನು ನೀಡಿ ಗೌರವಿಸಲಾಯಿತು.

ಹಸೀನ್‌ಗೆ ಚಿನ್ನದ ಪದಕ
ತರೀಕೆರೆ: ತಾಲೂಕು ಛಾಯಾಗ್ರಾಹಕರ ಸಂಘದ ಗೌರವಾಧ್ಯಕ್ಷ ರಫೀಕ್ ಅಹಮದ್ ರಜಿಯಾ ಬಾನು ಇವರ ಪುತ್ರಿ ಸುಮಯತ್ ಹಸೀನ್ ಅವರಿಗೆ ಕುವೆಂಪು ವಿಶ್ವವಿದ್ಯಾನಿಲಯ ಇತ್ತೀಚೆಗೆ ನಡೆದ 24ನೇ ಘಟಕಿಕೋತ್ಸವದಲ್ಲಿ ಸ್ನಾತಕ ಕಾನೂನು ವಿಭಾಗದ ಪದವಿಯಲ್ಲಿ ಡಿಸ್ಟಿಂಕ್ಷನ್ ಪಡೆಯುವ ಮೂಲಕ ಬಂಗಾರದ ಪದಕ ಗಳಿಸಿದ್ದಾರೆ. ಪ್ರಥಮ ರ್ಯಾಂಕ್ ಪಡೆದ ವಿದ್ಯಾರ್ಥಿನಿಗೆ ರಾಜ್ಯಪಾಲ ಹಂಸರಾಜ್ ಭರದ್ವಾಜ್ ಅವರು ಪದಕ ನೀಡಿದರು.

ಶವ ಪತ್ತೆ
ಶಿವಮೊಗ್ಗ: ಅಪರಿಚಿತ ಪುರುಷನ ಶವ ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಗೆ ಸರಿಸುಮಾರು 35 ವರ್ಷವಿರಬಹುದೆಂದು ಅಂದಾಜಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ದೊಡ್ಡಪೇಟೆ ಠಾಣೆ ಪೊಲೀಸರು ವಾರಸುದಾರರ ಪತ್ತೆ ಕಾರ್ಯ ಕೈಗೊಂಡಿದ್ದಾರೆ.

ಜೂಜು: ಸೆರೆ
ಓಸಿ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಗರದ ಬಾಲರಾಜ್ ಅರಸ್ ರಸ್ತೆಯ ಮುಖ್ಯ ಅಂಚೆ ಕಚೇರಿಯ ಬಳಿ ಈ ಘಟನೆ ನಡೆದಿದ್ದು, ಬಂಧಿತ ಮೂವರಿಂದ 3000 ರು. ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಗೆ ನುಗ್ಗಿ ಕಳವು
ಶಿವಮೊಗ್ಗ: ಮನೆಗೆ ನುಗ್ಗಿದ ಕಳ್ಳರು 10 ಸಾವಿರ ಹೊತ್ತೊಯ್ದ ಪ್ರಸಂಗ ಜಯನಗರದಲ್ಲಿ ನಡೆದಿದೆ. ಗಿರೀಶ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಇವರ ಮಗಳು ಮನೆಯ ಕೋಣೆಯಲ್ಲಿ ಮಲಗಿದ್ದಾಗ ಚಿನ್ನಾಭರಣ ಕದಿಯಲು ಕಳ್ಳ ಆಗಮಿಸಿದ್ದಾನೆ. ಆಕೆ ಎಚ್ಚರಗೊಂಡಿದ್ದರಿಂದ ಚಿನ್ನಾಭರಣ ಕದಿಯುವ ಯತ್ನ ಅರ್ಧಕ್ಕೆ ನಿಲ್ಲಿಸಿದ್ದಾನೆ.
ಪರಾರಿಯಾಗುವ ವೇಳೆ ಕೊಠಡಿಯ ಬಾಗಿಲಿಗೆ ನೇತು ಹಾಕಿದ್ದ ಪ್ಯಾಂಟ್ ಜೇಬಿನಲ್ಲಿದ್ದ 10 ಸಾವಿರ ರುಪಾಯಿ ಕದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement