ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ
ತರೀಕೆರೆ: ಬಿಜೆಪಿಯಿಂದ ಪಟ್ಟಣದಲ್ಲಿ ಮಂಗಳವಾರ ಉಡುಪಿ- ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಮತಯಾಚನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ರೇವಣಸಿದ್ದೇಶ್ವರ ದೇವಾಲಯ ಆವರಣದಿಂದ ಮತಯಾಚನೆ ಕಾರ್ಯಕ್ರಮ ಪ್ರಾರಂಭಿಸಲಾಯಿತು.
ಮಾಜಿ ಶಾಸಕ ಟಿ.ಎಚ್. ಶಿವಶಂಕರಪ್ಪ, ಡಿ.ಎಸ್. ಸುರೇಶ್, ಟಿ.ಎಂ. ಭೋಜರಾಜ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಟಿ.ಜಿ. ಸದಾನಂದ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ಎಲ್. ರಮೇಶ್, ಮ್ಯಾಮ್‌ಕೋಸ್ ನಿರ್ದೇಶಕ ಆರ್. ದೇವಾನಂದ್, ಅಜಯ್ ಕುಮಾರ್, ಟಿ.ಎಸ್. ಶಾಂತರಾಜ್, ಶಿವಮೂರ್ತಿ ಸೇರಿದಂತೆ ನೂರಾರು ಕಾರ್ಯಕರ್ತರು ಮತಯಾಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.