ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸೌಲಭ್ಯ ಸದುಪಯೋಗವಾಗಲಿ: ಜಗದೀಶ್

Lingaraj Badiger
Updated On : 26 Mar 2014, 12:37 pm

ನರಸಿಂಹರಾಜಪುರ: ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸ್ವಸಹಾಯ ಸಂಘಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಇಒ ಜಗದೀಶ್ ಕರೆ ನೀಡಿದರು.
ಸೋಮವಾರ ತಾಲೂಕಿನ ನಾಗಲಾಪುರ ಗ್ರಾಪಂ ವ್ಯಾಪ್ತಿಯ ಹೆಗ್ಗೇರಿ ಕಾಲೋನಿಯ ಸಮುದಾಯ ಭವನದಲ್ಲಿ ಜಿಪಂ, ತಾಪಂ, ಹಾಗೂ  ನಾಗಲಾಪುರ ಗ್ರಾಮ ಪಂಚಾಯ್ತಿ ಸಂಯುಕ್ತಾಶ್ರಯದಲ್ಲಿ ನಡೆದ ಶೃಂಗೇರಿ ಕ್ಷೇತ್ರ ಮಟ್ಟದ ಸಂಜೀವಿನಿ ಯೋಜನೆಯಡಿ ಬರುವ ಸ್ವಸಹಾಯ ಸಂಘಗಳ ಸದಸ್ಯರಿಗೆ ನಡೆದ 3 ದಿನಗಳ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು.
ಮೂರೂ ತಾಲೂಕುಗಳ ಪ್ರತಿ ಗ್ರಾಮ ಪಂಚಾಯ್ತಿಯ ಸಂಜೀವಿನಿ ಸ್ವಸಹಾಯ ಸಂಘದ ಒಬ್ಬ ಸದಸ್ಯರಿಗೆ ಮಾತ್ರ ತರಬೇತಿ ನೀಡಲಾಗುತ್ತದೆ. ತರಬೇತಿ ಪಡೆದ ಆ ಸದಸ್ಯರು ತಮ್ಮ ಗುಂಪಿಗೆ ತರಬೇತಿ ನೀಡಬೇಕಾಗಿದೆ ಎಂದು ಹೇಳಿದರು.
ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿಯಿಂದ ಆಗಮಿಸಿದ್ದ ಸಂಪನ್ಮೂಲ ವ್ಯಕ್ತಿಗಳಾದ ಉಮೇಶ ಮತ್ತು ಯತಿರಾಜ್ ತರಬೇತಿ ನೀಡಿ, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಯಾವ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು, ಬಡತನ ಮತ್ತು ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಸಂಜೀವಿನಿ ಸ್ವಸಹಾಯ ಸಂಘಗಳನ್ನು ಮುನ್ನಡೆಸುವ ವಿಧಾನಗಳ ಬಗ್ಗೆ ಮಾತನಾಡಿದರು.
ಸಭೆಯಲ್ಲಿ ಜಿಪಂ ಎಪಿಒ ಪಾಟೀಲ್, ತಾಪಂ ಸಹಾಯ ಲೆಕ್ಕಾಧಿಕಾರಿ ರಾಮಚಂದ್ರಯ್ಯ, ಧನಂಜಯ ಮೂರ್ತಿ,  ನಾಗಲಾಪುರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಜೋಸೆಫ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement