ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮತಗಟ್ಟೆ ಸಿಬ್ಬಂದಿಗೆ ತರಬೇತಿ

Vishwanath S
Updated On : 30 Mar 2014, 12:33 pm

ಚಿಕ್ಕಮಗಳೂರು: ಉಡುಪಿ- ಚಿಕ್ಕಮಗಳೂರು ಲೋಕಸಭೆಗೆ ನಡೆಯಲಿರುವ ಚುನಾವಣೆಗೆ ಜಿಲ್ಲೆಯಿಂದ ನೇಮಕಗೊಂಡಿರುವ ಮತಗಟ್ಟೆ ಅಧಿಕಾರಿ ಸಿಬ್ಬಂದಿಗೆ ನಗರದ ಎಐಟಿ ಕಾಲೇಜು ಸಭಾಂಗಣದಲ್ಲಿ ಮೊದಲನೇ ಸುತ್ತಿನ ತರಬೇತಿಯನ್ನು ಶನಿವಾರ ನೀಡಲಾಯಿತು.
ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಕಾರ್ಯಾಗಾರದಲ್ಲಿ ಮಾತನಾಡಿ, ಮತಯಂತ್ರದ ಸಮರ್ಪಕ ಬಳಕೆ ಸೇರಿದಂತೆ ಮತದಾನ ಕೇಂದ್ರದಲ್ಲಿ ಮತಗಟ್ಟೆ ಅಧಿಕಾರಿ ಹಾಗೂ ಇತರೆ ಸಿಬ್ಬಂದಿ ವಹಿಸಬೇಕಾದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಶಿಬಿರದಲ್ಲಿ ಪಡೆಯುವುದರೊಂದಿಗೆ ತಮ್ಮಲ್ಲಿರುವ ಅನುಮಾನ ಬಗೆಹರಿಸಿಕೊಳ್ಳಬೇಕು. ಸುಲಲಿತ ಹಾಗೂ ಯಶಸ್ವಿ ಚುನಾವಣಾ ಕಾರ್ಯನಿರ್ವಹಣೆಗೆ ಎಲ್ಲರೂ ಶ್ರಮಿಸುವಂತೆ ಸಿಬ್ಬಂದಿಗೆ ತಿಳಿಸಿದರು.
ಇದೇ ಸಂದರ್ಭ ಸಲೀಂ ಪಾಷಾ ಹಾಗೂ ರವಿಪ್ರಸಾದ್ ಚುನಾವಣಾ ಪ್ರಕ್ರಿಯೆ ಬಗ್ಗೆ ತರಬೇತಿ ನೀಡಿದರು. 9 ಜನ ಸೆಕ್ಟರ್ ಆಫೀಸರ್‌ಗಳು ಪ್ರತ್ಯೇಕವಾಗಿ ಎಲೆಕ್ಟ್ರಾನಿಕ್ ಮತಯಂತ್ರಗಳ ಬಳಕೆ ಬಗ್ಗೆ ತರಬೇತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಅರ್ಚನಾ ಮಾತನಾಡಿ, ಚುನಾವಣೆ ಕಾರ್ಯಗಳು ಸುಗಮವಾಗಿ ಯಾವುದೇ ರೀತಿಯ ಗೊಂದಲಗಳಿಲ್ಲದೆ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ತಹಸೀಲ್ದಾರ್ ಶಿವಣ್ಣ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಸಂದರ್ಭದಲ್ಲಿ ಅನುಸರಿಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು. ಸಹಾಯಕ ಚುನಾವಣಾಧಿಕಾರಿ ರಾಜಗೋಪಾಲ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿಕ್ಕಮಗಳೂರಿನ ಎಐಟಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆದ ಮತಗಟ್ಟೆ ಅಧಿಕಾರಿಗಳ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಶೇಖರಪ್ಪ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement